Featured

ರೈತರಿಗೆ ಹಣ ಕೊಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆ ಕೂಡಲೇ ಮರು ಜಾರಿಗೊಳಿಸಿ : ಯಡಿಯೂರಪ್ಪ ಆಗ್ರಹ- Vishwanews24

ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೊಡುತ್ತಿದ್ದ ಹಣ ಈಗಿನ ಸರ್ಕಾರ ನಿಲ್ಲಿಸಿರುವುದು ಖಂಡನೀಯ..

ರೈತರಿಗೆ ಹಣ ಕೊಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆ ಕೂಡಲೇ ಮರು ಜಾರಿಗೊಳಿಸಿ : ಯಡಿಯೂರಪ್ಪ ಆಗ್ರಹ

ಮೈಸೂರು(Vishwanews24):ರಾಜ್ಯದಲ್ಲಿ ಭೀಕರ ಬರಗಾಲ ತಾಂಡವಾಡುತ್ತಿದೆ. ಇದರ ಜೊತೆಗೆ ಕುಡಿಯುವ ನೀರಿಗಾಗಿ ಹಾಹಾಕಾರ ಆಗುವ ಸಾಧ್ಯತೆ ಇದೆ. ಹೀಗಿರುವಾಗ ರೈತರು ಮುಂದಿನ ಭವಿಷ್ಯದ ಬಗ್ಗೆ ಯೋಚನೆ ಮಾಡುವ ಪರಿಸ್ಥಿತಿ ಒದಗಿ ಬಂದಿದೆ. ಹೀಗಾಗಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೊಡುತ್ತಿದ್ದ ಹಣ ಈಗಿನ ಸರ್ಕಾರ ನಿಲ್ಲಿಸಿರುವುದು ಖಂಡನೀಯ. ಕೂಡಲೇ ಈ ಯೋಜನೆ ಮರು ಜಾರಿ ಮಾಡಬೇಕು ಎಂದು ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಸುತ್ತೂರು ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಿ.ಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ರೈತರಿಗೆ ಕೇಂದ್ರ ಸರ್ಕಾರ 6 ಸಾವಿರ ನೀಡಿದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ 4 ಸಾವಿರ ಸೇರಿಸಿ ಒಟ್ಟು 10 ಸಾವಿರ ಕೊಡುತ್ತಿತ್ತು. ಇಂದಿನ ರಾಜ್ಯ ಸರ್ಕಾರ ಅದನ್ನು ನಿಲ್ಲಿಸಿ ಬಿಟ್ಟಿದೆ. ರೈತರಿಗೆ ಸಂಕಷ್ಟದ ಸಂದರ್ಭದಲ್ಲಿ ಪ್ರೋತ್ಸಾಹ ಧನ ನೀಡಬೇಕು’ ಎಂದು ಒತ್ತಾಯಿಸಿದರು.

ಮಠ ಮಾನ್ಯಗಳು ಗ್ರಾಮೀಣ ಭಾಗದ ಜನರಿಗೆ ನೀಡುತ್ತಿರುವ ಶಿಕ್ಷಣ, ಅನ್ನ,ಆರೋಗ್ಯ ನೀಡುತ್ತ ಸರ್ಕಾರದ ಮೇಲಿನ ಜವಾಬ್ದಾರಿಯನ್ನ ಕಡಿಮೆ ಮಾಡುತ್ತಿವೆ.ನಾನು ಮುಖ್ಯಮಂತ್ರಿಯಾಗಿದ್ದಾಗ ಮಠ ಮಾನ್ಯಗಳಿಗೆ ಸಾಕಷ್ಟು ಅನುದಾನ ನೀಡಿದ್ದೆ. ಪ್ರಧಾನಿ ಮೋದಿ ಅವರು ಒಂದು ಮಹತ್ತರ ನಿರ್ಧಾರ ಮಾಡಿದ್ದಾರೆ. 1 ಕೆ.ಜಿ ಅಕ್ಕಿಗೆ 29 ರೂ ನಂತೆ ಜನ ಸಾಮಾನ್ಯರಿಗೆ ನೀಡಲು ಮುಂದಾಗಿದ್ದಾರೆ. ಇಂದು 1ಕೆಜಿ ಅಕ್ಕಿಗೆ 50 ರಿಂದ 60 ರೂ ಆಗಿದೆ. ಜನರಿಗೆ ಕಡಿಮೆ ಬೆಲೆಯಲ್ಲಿ ಭಾರತ್ ರೈಸ್ ಎಂಬ ಬ್ರಾಂಡ್ ಅಡಿ ನೀಡಲು ನಿರ್ಧಾರ ಮಾಡಿದ್ದಾರೆ ಇದು ಒಳ್ಳೆಯ ಯೋಜನೆ ಎಂದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

7 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

8 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

8 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

8 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

9 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

9 hours ago