ರೈತರು ಪರಿಹಾರ ಧನ ಪಡೆಯಲು ಆಧಾರ್ ಗೆ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಜೋಡಿಸಿ : ಸಚಿವ ಬಿಸಿ ಪಾಟೀಲ್ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಆಧಾರ್ ಸಂಖ್ಯೆಗೆ ಇದೂವರೆಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡದ ರೈತರು ಆದಷ್ಟು ಬೇಗ ತಪ್ಪದೇ ಆಧಾರ್ ಸಂಖ್ಯೆಗೆ ಬ್ಯಾಂಕ್ ಅಕೌಂಟನ್ನು ಜೋಡಣೆ‌ ಮಾಡಬೇಕೆಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಮನವಿ ಮಾಡಿದ್ದಾರೆ.

ಸರ್ಕಾರ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ರಾಜ್ಯದ ವಿವಿಧ ಯೋಜನೆಯಡಿ ಡಿಬಿಟಿ ಮಾರ್ಗಸೂಚಿಯಂತೆ ವಿದ್ಯುನ್ಮಾನವಾಗಿ ನೇರವಾಗಿ ರೈತರ ಖಾತೆಗೆ ಆಧಾರ್ ಆಧಾರಿತ ವ್ಯವಸ್ಥೆಯ ಮೂಲಕವರ್ಗಾಯಿಸಲಾಗುತ್ತಿದೆ. ಬಹುತೇಕ ರೈತರು ತಮ್ಮ ಆಧಾರ್ ಕಾರ್ಡನ್ನು ಅಕೌಂಟ್ ನಂ.ಗೆ ಲಿಂಕ್ ಮಾಡಿಲ್ಲ. ರೈತರು ತಮ್ಮತಮ್ಮ ಆಧಾರ್ ಕಾರ್ಡನ್ನು ತಾವು ಉಪಯೋಗಿಸುತ್ತಿರುವ ಬ್ಯಾಂಕ್ ಖಾತೆಗೆ ಕಡ್ಡಾತವಾಗಿ ಜೋಡಣೆ ಮಾಡಬೇಕು ಎಂದು ಮನವಿ ಮಾಡಿದರು.

ಮೆಕ್ಕೆಜೋಳ ಹಾಗೂ ಹೂವುಬೆಳೆದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹತ್ತು ಲಕ್ಷ ರೈತರಿಗೆ ತಲಾ ಐದು ಸಾವಿರದಂತೆ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಆನ್ಲೈನ್ ಮೂಲಕ ಪರಿಹಾರ ಯೋಜನೆಗೆ ಚಾಲನೆ ನೀಡಲಾಗಿದೆ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿದ ರೈತರಿಗೆ ಪರಿಹಾರ ಹೋಗಿದೆ. ಆದರೆ ಇನ್ನೂ ಕೆಲವು ರೈತರು ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯನ್ನು ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಲ್ಲ.ಇನ್ನೂ ಕೆಲವು ಹೋಗಿದೆ.ಏರ್ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಿದ್ದಾರೆ.ಹೀಗಾಗಿ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಗೆ ಪರಿಹಾರದ ಹಣ ಹೋಗಿರುವುದು ತಮ್ಮ ಗಮನಕ್ಕೆ ಬಂದಿದೆ. ಏರ್‌ಟೆಲ್ ಯಾವುದೇ ಶಾಖೆಗಳನ್ನು ಹೊಂದಿಲ್ಲ.ಹೀಗಾಗಿ ಏರ್‌ಟೆಲ್ ಔಟ್‌ಲೆಟ್‌ಗಳಿಗೆ ಹೋಗಿ ಹಣ ಪಡೆಯಬೇಕಿದೆ.ಬೇರೆ ಜಿಲ್ಲೆಗಳಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ. ಇದನ್ನು ನಾವು ಪತ್ತೆ ಹಚ್ಚಿದ್ದೇವೆ.ಈ ಬಗ್ಗೆ ಏರ್ಟೆಲ್ ಕಂಪೆನಿಯ ಗಮನಕ್ಕೂ ತಂದು ಸೂಕ್ತ ಕ್ರಮಕೈಗೊಳ್ಳಲಾಗುವುದು. ಈ ಸಂಬಂಧ ಅಧಿಕಾರಿಗಳ ಜೊತೆ ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬಹುದೆಂದು ಚರ್ಚಿಸಲಾಗುವುದು ಎಂದರು.