ರಾಜ್ಯ ನ್ಯೂಸ್

ರೈತರ ದಾರಿ ತಪ್ಪಿಸಬೇಡಿ, ಬಿಜೆಪಿಯವರೇ ನಾಲಿಗೆ ಮೇಲೆ ಹಿಡಿತವಿರಲಿ ಎಂದ ಕುಮಾರ ಸ್ವಾಮಿ

ಬೆಂಗಳೂರು: ಸಾಲ ಮನ್ನಾ ವಿಷಯದಲ್ಲಿ ಪ್ರತಿಪಕ್ಷ ಹಾಗೂ ಮಾಧ್ಯಮಗಳು ತಪ್ಪು ಮಾಹಿತಿ ನೀಡಿ ರೈತರನ್ನು ಆತ್ಮಹತ್ಯೆಗೆ ಪ್ರೇರೆಪಿಸಬೇಡಿ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು 34 ಸಾವಿರ ಕೋಟಿ ಸಾಲ ಮನ್ನಾ ಮಾಡಿರುವುದು ದರೋಡೆಕೋರರಿಗಲ್ಲ. ನನ್ನ ಮನೆಗೂ ತೆಗೆದುಕೊಂಡು ಹೋಗುತ್ತಿಲ್ಲ. ಬಿಜೆಪಿಯವರಿಗೆ ಮಾತನಾಡಲು ನಾಲಿಗೆ ಮೇಲೆ ಹಿಡಿತ ಇರಬೇಕು ಎಂದು ಖಾರವಾಗಿ
ಮಾತನಾಡಿದ್ದಾರೆ.

ಬಜೆಟ್‌ನಲ್ಲಿ ಉತ್ತರ ಕರ್ನಾಟಕ, ಹಳೆ ಮೈಸೂರು ಎಂದು ಯಾವುದೇ ತಾರತಮ್ಯ ಮಾಡಿಲ್ಲ. ನಾನು ಒಂದು ಜಾತಿಗೆ ಸೇರಿದ ಮುಖ್ಯಮಂತ್ರಿಯಲ್ಲ. ನಾನು ಅನ್ನದಾತರ ಮುಖ್ಯಮಂತ್ರಿ.ಮಾಧ್ಯಮಗಳು ಸರ್ಕಾರವನ್ನು ಟೀಕೆ ಮಾಡಲಿ.ಯಾವ ರೈತರೂ ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ ಎಂದು ಮನವಿ ಮಾಡಿದರು.

ನಾನು ವೈಯಕ್ತಿಕ ಆಸೆ ಆಕಾಂಕ್ಷೆ ಇಟ್ಟುಕೊಂಡು ಯೋಜನೆ ರೂಪಿಸುತ್ತಿಲ್ಲ. ನಾನು ಎಲ್ಲಿಯೂ ಓಡಿ ಹೋಗುವುದಿಲ್ಲ. ಸಾಲ ಮನ್ನಾ ಬಗ್ಗೆ ಸದನದಲ್ಲಿ ಚರ್ಚಿಸಲು ಸಿದ್ದವಿದ್ದೇನೆ. ಇಂಧನ ದರ ಏರಿಕೆಯ ಬಗ್ಗೆ ಸಂಪುಟದಲ್ಲಿಯೇ ಚರ್ಚಿಸಿ ತೀರ್ಮಾನ ಮಾಡಲಾಗಿದೆ. ರೈತರಿಗಾಗಿ ಹತ್ತು ಪೈಸೆ ಕೊಡಲು ಜನರಿಗೆ ಕಷ್ಟವೇ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಸರ್ಕಾರದ ಯಾವ ಯೋಜನೆಗಳನ್ನೂ ನಿಲ್ಲಿಸುವುದಿಲ್ಲ. ಬಿಜೆಪಿಯವರು ನನ್ನ ಹೆಸರು ಕೆಡಿಸಬೇಕೆಂದು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago