ರೈತರ ಪಂಪ್​ಸೆಟ್​ಗಳಿಗೆ ನಿತ್ಯ 5 ಗಂಟೆ ವಿದ್ಯುತ್​ ಪೂರೈಸಲು ಸೂಚಿಸಿದ್ದೇನೆ : ಸಿಎಂ – Vishwanews24

Featured, ರಾಜ್ಯ ನ್ಯೂಸ್

ರೈತರ ಪಂಪ್​ಸೆಟ್​ಗಳಿಗೆ ನಿತ್ಯ 5 ಗಂಟೆ ವಿದ್ಯುತ್​ ಪೂರೈಸಲು ಸೂಚಿಸಿದ್ದೇನೆ : ಸಿಎಂ

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗಿರುವುದು ನಿಜ. ರೈತರ ಪಂಪ್​ಸೆಟ್​ಗಳಿಗೆ ನಿತ್ಯ 5 ಗಂಟೆ ವಿದ್ಯುತ್​ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದಲ್ಲಿ 2000 ಮೆಗಾ ವ್ಯಾಟ್ ವಿದ್ಯುತ್ ಕೊರತೆ ಇದೆ. ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುತ್ತೇವೆ.

ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆ ನಡೆಯಲಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಹೊರಗಡೆ ವಿದ್ಯುತ್ ಖರೀದಿ ಮಾಡಲು ಕೂಡ ನಾನು ಸೂಚನೆ ಕೊಟ್ಟಿದ್ದೇನೆ. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ಆದಷ್ಟು ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ‌ ಎಂದರು.

ಉಡುಪಿ ಜಿಲ್ಲಾಡಳಿತ ವತಿಯಿಂದ ಜನತಾ ದರ್ಶನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಅಹವಾಲು ಸ್ವೀಕಾರ:vishwanews24

Leave a Reply