ಕಲಬುರಗಿ: ಗ್ರಾಮೀಣ ಭಾಗದಲ್ಲಿ ದುರಸ್ತಿಗೊಳಗಾದ ವಿದ್ಯುತ್ ಟ್ರಾನ್ಸ್ಫಾರ್ಮರ್(ಪರಿವರ್ತಕ)ಗಳ ಬದಲಾವಣೆಯನ್ನು 24 ಗಂಟೆಯೊಳಗೆ ಮಾಡಲೇಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜೆಸ್ಕಾಂ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಜೆಸ್ಕಾಂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣವಿಲ್ಲದೇ ಟ್ರಾನ್ಸ್ಫಾರ್ಮರ್ ಬದಲಾವಣೆ ಪ್ರಕ್ರಿಯೆಯಲ್ಲಿ ವಿಳಂಬ ಮಾಡಬಾರದು ಎಂದು ತಾಕೀತು ಮಾಡಿದರು. ಟ್ರಾನ್ಸ್ಫಾರ್ಮರ್ ಬದಲಾವಣೆ ಸಂಬಂಧ ರೈತರಲ್ಲಿ ಕೆಲ ಸಿಬ್ಬಂದಿ ಹಣದ ಬೇಡಿಕೆ ಇಡುತ್ತಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಯಾರಾದರೂ ಇಂತಹ ಬೇಡಿಕೆ ಇಟ್ಟಲ್ಲಿ, ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿ, ಇಂತಹ ಪ್ರಕರಣಗಳ ಕೈಬಿಡುವಂತೆ ಯಾರಾದರೂ ಪ್ರಭಾವಿ ವ್ಯಕ್ತಿಗಳ ಮೂಲಕ ನನ್ನ ಮೇಲೆ ಒತ್ತಡ ಹೇರಲು ಮುಂದಾದರೆ ನಾನು ಯಾವುದಕ್ಕೂ ಜಗ್ಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ನೋಂದಾಯಿತ ಫಲಾನುಭವಿ ರೈತರ ಪಂಪ್‍ಸೇಟ್‍ಗಳಿಗೆ ಯಾವುದೇ ವಿಳಂಬವಿಲ್ಲದೇ 30 ದಿನಗಳಲ್ಲಿ ವಿದ್ಯುತ್ ಪೂರೈಸಬೇಕು. ಇತ್ತೀಚೆಗೆ ತೋಟದ ಮನೆಗಳು ಹೆಚ್ಚಾಗುತ್ತಿದ್ದು, ಆದರೆ ಈ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು ಸವಾಲಾಗಿದೆ. ಪುಟ್ಟ-ಪುಟ್ಟ ಮಕ್ಕಳು, ಜಾನುವಾರುಗಳು ಇಂತಹ ಮನೆಗಳಲಿದ್ದು, ರಾತ್ರಿ ವೇಳೆ ಕತ್ತಲೆಯಲ್ಲಿ ದಿನದೂಡಬೇಕಾಗಿದೆ. ಇಂತಹ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವೈಜ್ಞಾನಿಕವಾಗಿ ಕ್ರಮಕೈಗೊಳ್ಳಬೇಕು. ಮೊದಲು ಜಿಲ್ಲೆಯಲ್ಲಿ ತೋಟದ ಮನೆಗಳು ಎಷ್ಟು ಇವೆ ಎಂಬುವುದನ್ನು ಸಮೀಕ್ಷೆ ಮಾಡಬೇಕು. ಬಳಿಕ ಯಾವ ವಿಧಾನದ ಮೂಲಕ ಈ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬಹುದು ಎಂಬುದರ ಬಗ್ಗೆ ಮೂರು ತಿಂಗಳಲ್ಲಿ ಯೋಜನೆ ರೂಪಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.
ನಿರಂತರವಾಗಿ 7 ತಾಸು ರೈತರ ಪಂಪ್‍ಸೇಟ್‍ಗಳಿಗೆ ವಿದ್ಯುತ್ ಪೂರೈಕೆಯಾಗಬೇಕು. ವಿದ್ಯುತ್ ಪೂರೈಕೆ ಕೇವಲ ದಾಖಲೆಗಳಲ್ಲಿರಬಾರದು, ಅದು ಕಾರ್ಯರೂಪದಲ್ಲಿರಬೇಕು. ಈ ಸಂಬಂಧ ಅಧಿವೇಶನ ಸಂದರ್ಭದಲ್ಲಿ ಎಲ್ಲಾ ಶಾಸಕರ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದ ಅವರು, ಸಭೆಯಲ್ಲಿ ಶಾಸಕರು ಜಿಲ್ಲೆಯ ವಿದ್ಯುತ್ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರೆ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಜೆಸ್ಕಾಂ ಗ್ರಾಹಕರ ಸಹಾಯವಾಣಿ-1912ಗೆ ಬರುವ ದೂರು ಕರೆಗಳಿಗೆ ಪೂರಕವಾಗಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಕೇವಲ ತಾಂತ್ರಿಕ ಕಾರಣ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಎಂದು ಖಾರವಾಗಿ ಹೇಳಿದ ಸಚಿವರು, ಈ ಸಂಬಂಧ ತಮಗೆ ನಿತ್ಯ ಕರೆಗಳು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಕರೆಗಳು ಬಾರದಂತೆ ನೋಡಿಕೊಳ್ಳಿ ಎಂದರು.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…