ಬೆಂಗಳೂರು: ಕಲಬುರಗಿ ಜೇವರ್ಗಿ ತಾಲ್ಲೂಕಿನ ಇಟ್ಟನಹಳ್ಳಿ ಗ್ರಾಮದ ರೈತರು ಬೆಳೆ ವಿಮೆಗೆ ಪಾವತಿಸಿದ್ದ ಹಣವನ್ನು ಡಿಸಿಸಿ ಬ್ಯಾಂಕಿಗೆ ಪಾವತಿ ಮಾಡದ ಕಾರಣ 93 ರೈತರ ವಿಮೆ ತಿರಸ್ಕಾರಗೊಂಡಿದ್ದು, ಈ ವಿಚಾರದಲ್ಲಿ ನಿರ್ಲಕ್ಷ ತೋರಿರುವ ಸ್ವಸಹಾಯ ಸೊಸೈಟಿ ಕಾರ್ಯದರ್ಶಿ ವಜಾಗೊಳಿಸಲು ಸಿಎಂ ಸೂಚನೆ ನೀಡಿದರು.
ಮಂಗಳವಾರ ಬೆಳಗ್ಗೆ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಶಿವಕುಮಾರ್ ಅವರು ಅಲ್ಲಿ ಬಂದಿದ್ದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ತೆಂಗು ಬೆಳೆಗಾರರು, ವರ್ತಕರು ಹಾಗೂ ಮಂಡಿ ಮಾಲೀಕರ ಜೊತೆ ಮಾತುಕತೆ ನಡೆಸಿ, ಅವರ ಸಮಸ್ಯೆ ಆಲಿಸಿದರು.
ಇಟ್ಟನಹಳ್ಳಿ ಗ್ರಾಮದ ರೈತ ಸಿಎಂ ಅವರನ್ನು ಭೇಟಿ ಮಾಡಿ ನಾವು ಬೆಳೆ ವಿಮೆಗೆ ಸ್ವ ಸಹಾಯ ಸೊಸೈಟಿಗೆ ಹಣ ಕಟ್ಟಿದ್ದು, ಅವರು ಡಿಸಿಸಿ ಬ್ಯಾಂಕಿಗೆ ಹಣ ಪಾವತಿ ಮಾಡದ ಕಾರಣ ನಮ್ಮ ವಿಮೆ ತಿರಸ್ಕೃತಗೊಂಡಿದೆ ಎಂದು ನಮಗೆ ಮೆಸೇಜ್ ಬಂದಿದೆ ಎಂದು ತಮ್ಮ ಅಳಲು ತೋಡಿಕೊಂಡರು.
ರೈತರು ಹಣ ಪಾವತಿ ಮಾಡಿರುವ ಪಟ್ಟಿ ಪರಿಶೀಲಿಸಿದ ಸಿಎಂ, ಕೂಡಲೇ ನಿರ್ಲಕ್ಷ ತೋರಿರುವ ಅಧಿಕಾರಿಯನ್ನು ವಜಾಗೊಳಿಸುವಂತೆ ಸೂಚನೆ ನೀಡಿದರು.
ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ರೆ ತಕ್ಷಣ ಅರೆಸ್ಟ್ ಮಾಡಿ : ಅಧಿಕಾರಿಗಳಿಗೆ ಸಿಎಂ ಖಡಕ್ ಆದೇಶ ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.…
ಉಡುಪಿ: ನವಜಾತ ಶಿಶು ಸಾವನ್ನಪ್ಪಿದ ಪ್ರಕರಣ ; ಕಠಿಣ ಕ್ರಮಕ್ಕೆ CWC ಗೆ ಎಪಿಸಿಆರ್ ನಿಂದ ದೂರು ಉಡುಪಿ: ಉಡುಪಿ…
ಒಂದು ವಾರದಲ್ಲಿ 3 ಕೋಟಿ ರೂ. ಮೌಲ್ಯದ ಆಹಾರ ವಸ್ತುಗಳು, ಎಕ್ಸ್ಪೈರಿ ಔಷಧಗಳು ವಶಕ್ಕೆ.. ಕರ್ನಾಟಕ ಸರ್ಕಾರವು ಸಾರ್ವಜನಿಕರ ಆರೋಗ್ಯ…
108 ಆ್ಯಂಬುಲೆನ್ಸ್ ವಾಹನ ಸಿಬ್ಬಂದಿಯಿಂದ ರಾಜೀನಾಮೆ ಎಚ್ಚರಿಕೆ: ಸೇವೆಯಲ್ಲಿ ವ್ಯತ್ಯಯವಾದರೆ ಸರ್ಕಾರವೇ ಹೊಣೆ : ಅಶೋಕ್ ಬೆಂಗಳೂರು: ವಿವಿಧ ಬೇಡಿಕೆಗಳಿಗೆ…
ವಿಟ್ಲ : ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮೂವರ ಬಂಧನ ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ಮಂಗಳೂರು : ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಿಢೀರ್ ದಾಳಿ: 9 ಕೈದಿಗಳಿಂದ 10 ಮೊಬೈಲ್ ವಶ ಮಂಗಳೂರು: ಮಂಗಳೂರಿನ ಜಿಲ್ಲಾ…