Featured

ರೈತರ ಸಾಲಮನ್ನದ ಬೆನ್ನಲ್ಲೇ, ಮತ್ತೊಂದು ಸಾಹಸಕ್ಕೆ ರೆಡಿಯಾದ ಕುಮಾರಸ್ವಾಮಿ,ನಿಮ್ಮದು ಸಾಲ ಮನ್ನ ಅಂತೆ ವಿದ್ಯಾರ್ಥಿಗಳೆ..!!!

ಬೆಂಗಳೂರು: ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಲು ಸಖತ್ ಸರ್ಕಸ್ ಮಾಡ್ತಾ ಇದೆ. ಈ ಮಧ್ಯೆ ಇನ್ನೊಂದು ಹೊಸ ನ್ಯೂಸ್ ಹೊರಬಿದ್ದಿದ್ದು, ರೈತರ ಸಾಲಮನ್ನಾ ಮಾಡಿದ ಬಳಿಕ ವಿದ್ಯಾರ್ಥಿಗಳ ಸಾಲಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ.

ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಮಾಡಿದ ಶೈಕ್ಷಣಿಕ ಸಾಲಮನ್ನಾ ಮಾಡಲು ತೆರೆಮರೆಯಲ್ಲಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಆದ್ರೆ ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಾಲಮನ್ನಾ ಮಾಡಲು ಚಿಂತನೆ ನಡೆಸಿದೆ.

ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆ, ಎಲ್ಲ ಜಿಲ್ಲೆಗಳ ಜಂಟಿ ಹಾಗೂ ಉಪನಿರ್ದೇಶಕರಿಗೆ ಪತ್ರ ಬರೆದಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಪಡೆದಿರುವ ಸಾಲದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಿದೆ.

ರಾಷ್ಟ್ರೀಕೃತ ಬ್ಯಾಂಕ್‌ಗಳನ್ನೊಳಗೊಂಡಂತೆ ಎಲ್ಲ ಬ್ಯಾಂಕ್‌ಗಳಿಂದ ಪಡೆದಿರುವ ಶೈಕ್ಷಣಿಕ ಸಾಲದ ಮಾಹಿತಿ ಪಡೆಯುವಂತೆ ಸೂಚಿಸಿದೆ.

ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಜಿಲ್ಲಾ ಉಪನಿರ್ದೇಶಕರಿಗೆ ವಿದ್ಯಾರ್ಥಿಗಳ ಹೆಸರು, ಕೋರ್ಸ್ ವಿವರ, ಬ್ಯಾಂಕ್ ಮತ್ತು ಸಾಲದ ಮೊತ್ತ, ಬಡ್ಡಿ ಮೊತ್ತ ಹಾಗೂ ಒಟ್ಟು ಮೊತ್ತದ ಮಾಹಿತಿ‌ ನೀಡುವಂತೆ ಸೂಚನೆ ನೀಡಿದೆ.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

1 hour ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

1 hour ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

1 hour ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

2 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

5 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

5 hours ago