ಬೆಂಗಳೂರು: ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಲು ಸಖತ್ ಸರ್ಕಸ್ ಮಾಡ್ತಾ ಇದೆ. ಈ ಮಧ್ಯೆ ಇನ್ನೊಂದು ಹೊಸ ನ್ಯೂಸ್ ಹೊರಬಿದ್ದಿದ್ದು, ರೈತರ ಸಾಲಮನ್ನಾ ಮಾಡಿದ ಬಳಿಕ ವಿದ್ಯಾರ್ಥಿಗಳ ಸಾಲಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ.
ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಮಾಡಿದ ಶೈಕ್ಷಣಿಕ ಸಾಲಮನ್ನಾ ಮಾಡಲು ತೆರೆಮರೆಯಲ್ಲಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಆದ್ರೆ ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಾಲಮನ್ನಾ ಮಾಡಲು ಚಿಂತನೆ ನಡೆಸಿದೆ.
ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆ, ಎಲ್ಲ ಜಿಲ್ಲೆಗಳ ಜಂಟಿ ಹಾಗೂ ಉಪನಿರ್ದೇಶಕರಿಗೆ ಪತ್ರ ಬರೆದಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಪಡೆದಿರುವ ಸಾಲದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಿದೆ.
ರಾಷ್ಟ್ರೀಕೃತ ಬ್ಯಾಂಕ್‌ಗಳನ್ನೊಳಗೊಂಡಂತೆ ಎಲ್ಲ ಬ್ಯಾಂಕ್‌ಗಳಿಂದ ಪಡೆದಿರುವ ಶೈಕ್ಷಣಿಕ ಸಾಲದ ಮಾಹಿತಿ ಪಡೆಯುವಂತೆ ಸೂಚಿಸಿದೆ.
ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಜಿಲ್ಲಾ ಉಪನಿರ್ದೇಶಕರಿಗೆ ವಿದ್ಯಾರ್ಥಿಗಳ ಹೆಸರು, ಕೋರ್ಸ್ ವಿವರ, ಬ್ಯಾಂಕ್ ಮತ್ತು ಸಾಲದ ಮೊತ್ತ, ಬಡ್ಡಿ ಮೊತ್ತ ಹಾಗೂ ಒಟ್ಟು ಮೊತ್ತದ ಮಾಹಿತಿ ನೀಡುವಂತೆ ಸೂಚನೆ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…