ರೈತರ ಸಾಲಮನ್ನಾಕ್ಕೆ ಇನ್ನು 15 ದಿನ ಕಾಲಾಕಾಶ ನೀಡಿ ಎಂದು ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿದ್ದಾರೆ. ಅವರು ಇನ್ನೆರಡು ದಿನಗಳಲ್ಲಿ ವಾಪಸ್ ಬರಲಿದ್ದಾರೆ. ಬಳಿಕ ಅವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಯಾವ ರೈತರಿಗೂ ಅನನುಕೂಲವಾಗದಂತೆ ನೋಡಿಕೊಳ್ಳುತ್ತೇನೆ. ಎರಡು ಹಂತದಲ್ಲಿ ಸಾಲ ಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇನೆ. ನಾವು ರೈತರಿಗೆ ನೀಡುವ ಹಣ ಪೋಲಾಗಬಾರದು. ಎಲ್ಲವನ್ನೂ ಪರಿಶೀಲನೆ ಮಾಡಿಯೇ ಬಿಡುಗಡೆ ಮಾಡುತ್ತೇನೆ. ಡಿಸೆಂಬರ್ ವರೆಗಿನ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿ ರೈತರ ಸಾಲ ಮನ್ನ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ಇವರಲ್ಲಿ ಕೆಲವರು ಆದಾಯ ತೆರಿಗೆ ವ್ಯಾಪ್ತಿಯಲ್ಲಿ ಇದ್ದರೆ ಅಂಥವರ ಬಗ್ಗೆ ಏನು ಮಾಡಬೇಕು? ಎಂದು ಪ್ರಶ್ನಿಸಿದರು.
ಅಲ್ಲದೆ ರೈತರು ಅಲ್ಲದವರೂ ಸಾಲ ಮಾಡಿಕೊಂಡಿದ್ದಾರೆ. ಗೊಬ್ಬರದ ಅಂಗಡಿ ಇಟ್ಟುಕೊಂಡು ಕೃಷಿ ಹೆಸರಲ್ಲಿ ಐದಾರು ಕೋಟಿ ಸಾಲ ಪಡೆದಿರುತ್ತಾರೆ. ಕಾಫಿ ಪ್ಲಾಂಟರ್ ಸಾಲ ತೆಗೆದುಕೊಂಡಿರುತ್ತಾರೆ. ಅದನ್ನೆಲ್ಲ ಹೇಗೆ ಮನ್ನಾ ಮಾಡುವುದು ಎಂಬ ಬಗ್ಗೆ ಚರ್ಚೆ ನಡೆಸಬೇಕು ಎಂದು ತಿಳಿಸಿದರು. ನನ್ನ ಸರ್ಕಾರ ಆರ್ಥಿಕ ಶಿಸ್ತು ಮೀರಿ ಹೋಗೋದಿಲ್ಲ. ನಿಮ್ಮನ್ನೂ ಉಳಿಸಿ, ನಮ್ಮ ಸರ್ಕಾರವನ್ನೂ ಐದು ವರ್ಷ ಉಳಿಸುವ ಜವಾಬ್ದಾರಿ ನನ್ನದು ಎಂದರು.
ಇದಕ್ಕೂ ಮೊದಲು ಡಿಸಿಎಂ ಪರಮೇಶ್ವರ್ ಮಾತನಾಡಿ, ರೈತರ ಸಾಲಮನ್ನಾ ಅಧ್ಯಯನಕ್ಕೆ ಸಮಿತಿ ರಚನೆ ಮಾಡುವ ಅವಶ್ಯಕತೆ ಇದೆ. ಒಂದೇ ಬಾರಿ ಮಾಡುವುದೋ, ಹಂತಹಂತವಾಗಿ ಮಾಡುವುದೋ ಎಂದು ಅಧ್ಯಯನ ಮಾಡಬೇಕು. ಜೆಡಿಎಸ್ ಬಹುಮತದ ಸರ್ಕಾರ ರಚನೆ ಮಾಡಿದ್ದರೆ ಕುಮಾರಸ್ವಾಮಿ ಇಷ್ಟೊತ್ತಿಗೆ ಆಗಲೇ ಸಾಲ ಮನ್ನಾ ಮಾಡುತ್ತಿದ್ದರು. ಸಮ್ಮಿಶ್ರ ಸರ್ಕಾರ ಇರುವುದರಿಂದ ಚರ್ಚೆ ನಡೆಸಬೇಕಾಗುತ್ತದೆ. ಯಾರಿಗೂ ಈ ಬಗ್ಗೆ ಅನುಮಾನ ಬೇಡ. ಖಂಡಿತ ಮನ್ನಾ ಆಗುತ್ತದೆ ಎಂದು ಭರವಸೆ ನೀಡಿದರು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…