ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ ಗಳ, ನೇಕಾರರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದೇವೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಜೊತೆ ಚರ್ಚಿಸಿದ್ದೇನೆ, ನಾಳೆ ಈ ಸಂಬಂಧ ದಾಖಲೆ ಪರಿಶೀಲಿಸಿ 2 ದಿನದೊಳಗೆ ನಿರ್ಧಾರ ಘೋಷಿಸುವುದಾಗಿ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬಿಎಸ್ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ಒಂದೂವರೆ ಗಂಟೆಯಲ್ಲೇ ರೈತರ ಸಾಲಮನ್ನಾ ಮಾಡಿರುವುದಾಗಿ ಖಾಸಗಿ ಮಾಧ್ಯಮಗಳು ವರದಿ ಪ್ರಕಟಿಸಿದ್ದವು.
ಗುರುವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಾನು ರಾಜ್ಯದ ಆರೂವರೆ ಕೋಟಿ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅನೈತಿಕ ಒಪ್ಪಂದ ಮಾಡಿಕೊಳ್ಳುವ ಮೂಲಕ ನಮ್ಮಿಂದ ಅಧಿಕಾರ ಕಸಿಯುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.
ಬಹುಮತ ಸಾಬೀತುಪಡಿಸುತ್ತೇವೆ, ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ ಕಾದು ನೋಡಿ ನಾವು ಬಹುಮತ ಸಾಬೀತುಪಡಿಸಿಯೇ ಸಿದ್ಧ ಎಂದು ಬಿಎಸ್ ವೈ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…