ಬೆಂಗಳೂರು: ರೈತರ ಸಾಲಮನ್ನಾ ಆಗುವ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರ ನಿರಾಸೆ ಮೂಡಿಸಿದೆ. ರೈತರ ಸಾಲಮನ್ನಾ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿಟಿ ರವಿ ಪ್ರಶ್ನೆಗೆ ಉತ್ತರಿಸಿದ ಅವರು, ಸಾಲಮನ್ನಾ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸಿಟಿ ರವಿ ಮಾತನಾಡಿ, ಸಹಕಾರ ಸಂಘದಲ್ಲಿ ಸರಿಯಾಗಿ ಸಾಲ ಸೌಲಭ್ಯ ನೀಡುತ್ತಿಲ್ಲ. ಅಗತ್ಯವಾಗಿ ಸಾಲ ಬೇಕಾಗಿರುವವರಿಗೆ ಸಾಲ ಸಿಗುತ್ತಿಲ್ಲ. ತಮಗೆ ಬೇಕಾದವರಿಗೆ ಮಾತ್ರ ಸಾಲ ನೀಡುವ ವ್ಯವಸ್ಥೆ ಸಹಕಾರಿ ಬ್ಯಾಂಕುಗಳಲ್ಲಿ ಇವೆ. ಬಾಗಿಲು ಹಾಕಿಕೊಂಡು ಕಿಟಕಿಯಲ್ಲಿ ವ್ಯವಹಾರ ಮಾಡುವ ವ್ಯವಸ್ಥೆ ಸಹಕಾರಿ ಇಲಾಖೆಯಲ್ಲಿ ಇದೆ ಈ ಬಗ್ಗೆ ಸರ್ಕಾರ ಕ್ರಮವಹಿಸಬೇಕು. ರೈತರ ಸಾಲಮನ್ನಾ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 1 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಸರ್ಕಾರ ರೈತರ ನೆರವಿಗೆ ಬರಬೇಕು. 2023ರ ಭಾಷಣದಲ್ಲಿ ಈ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಸಚಿವ ರಾಜಣ್ಣ ಉತ್ತರ ನೀಡಿ, 2024-25ರ ಸಾಲಿನಲ್ಲಿ ಜೂನ್ ಅಂತ್ಯದವರೆಗೆ ಸಹಕಾರಿ ಸಂಘಗಳು ಹೊಸದಾಗಿ ಅರ್ಜಿ ಸಲ್ಲಿಸಿದ 9,797 ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 93.49 ಕೋಟಿ ರೂ. ಬೆಳೆ ಸಾಲ ನೀಡಿದೆ. 2,815 ರೈತರಿಗೆ 138.36 ಕೋಟಿ ರೂ. ಮಧ್ಯಮ ಸಾಲ, ದೀರ್ಘಾವಧಿ ಸಾಲ ನೀಡಲಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಸಾಲಮನ್ನಾ ಮಾಡಿದೆ. ರಾಜಕೀಯಗೋಸ್ಕರ ರೈತರನ್ನು ಬಳಕೆ ಮಾಡೋದು ಬೇಡ. ಬಿಜೆಪಿ ಅವರು ಸಾಲಮನ್ನಾ ಮಾಡಿ ಎನ್ನುವ ಬದಲು ರಾಷ್ಟ್ರೀಯ ಬ್ಯಾಂಕ್ ಸಾಲಮನ್ನಾ ಕೇಂದ್ರ ಮಾಡಲಿ. ಅದನ್ನು ನೋಡಿಕೊಂಡು ನಾವು ಬೇಕಾದರೆ ಮಾಡುತ್ತೇವೆ. ಹೆಚ್ಚು ಸಾಲಮನ್ನಾ ಮಾಡಿರೋದು ಕಾಂಗ್ರೆಸ್ ಸರ್ಕಾರ. ಇದರಲ್ಲಿ ಬಿಜೆಪಿ ರಾಜಕೀಯ ಮಾಡೋದು ಬೇಡ. ಹಣಕಾಸು ಇತಿಮಿತಿಯಲ್ಲಿ ಸಾಲ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…