ಬೆಂಗಳೂರು: ರೈತರ ಹೋರಾಟಕ್ಕೆ ಹೆದರಿ ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯ್ದೆಯನ್ನು ರದ್ದು ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಈ ಕುರಿತಾಗಿ ಮಾತನಾಡಿದ ಅವರು, ರಾಹುಲ್ ಗಾಂಧಿ ಕೃಷಿ ಕಾಯ್ದೆ ರದ್ದು ಮಾಡಲಾಗುತ್ತದೆ ಎಂದು ಹೇಳಿದ್ದರು. ಅವರು ಹೇಳಿದಂತೆ ಆಗಿದೆ ಎಂದರು. ರೈತ ಹೋರಾಟಕ್ಕೆ ಮಣಿದು ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿದೆ. ಇದು ರೈತರಿಗೆ ಹಾಗೂ ಪ್ರಜಾಪ್ರಭುತ್ವಕ್ಕೆ ಸಂದ ಜಯ. ರೈತರು ಒಂದು ವರ್ಷದಿಂದ ಹೋರಾಟ ಮಾಡಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಇಂತಹ ಹೋರಾಟ ನಡೆದಿರಲಿಲ್ಲ ಎಂದು ಹೇಳಿದರು.
ಹೋರಾಟದಲ್ಲಿ ನೂರಾರು ಜನ ರೈತರು ಪ್ರಾಣ, ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ. ರೈತರ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಕೇಂದ್ರ ಸಚಿವರ ಪುತ್ರನ ಕಾರನ್ನು ರೈತರ ಮೇಲೆ ಹರಿಸಿ ನಾಲ್ವರು ರೈತರ ಸಾವಿಗೆ ಕಾರಣವಾಗಿತ್ತು. ಆದರೆ ರೈತರು ಹೆದರದೆ ಸ್ವಾತಂತ್ರ್ಯ ಹೋರಾಟ ಮಾದರಿಯಲ್ಲಿ ಹೋರಾಟ ಮಾಡಿದ್ದಾರೆ. ಈ ಮೂಲಕ ಪರಿವರ್ತನೆ ತಂದಿದ್ದಾರೆ ಎಂದರು.
ಕಾಯ್ದೆ ಹಿಂಪಡೆಯುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಅದರಂತೆ ಕೇಂದ್ರ ಈ ಕಾಯಿದೆಯನ್ನು ಹಿಂಪಡೆದಿದೆ. ಮುಂದಿನ ದಿನಗಳಲ್ಲಿ ಇದು ಒಂದು ಎಚ್ಚರಿಕೆ ಗಂಟೆ. ರೈತರಿಗೆ ಹೆದರಿ ಕಾಯಿದೆ ಹಿಂಪಡೆದಿದ್ದಾರೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…