Featured

ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : `ಮೊಬೈಲ್ ಆಪ್’ ನಲ್ಲಿ ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡುವಂತೆ ಸೂಚನೆ – Vishwanews24

ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : `ಮೊಬೈಲ್ ಆಪ್’ ನಲ್ಲಿ ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡುವಂತೆ ಸೂಚನೆ

ಬೆಂಗಳೂರು : ರೈತರಿಂದಲೇ ತಮ್ಮ ಜಮೀನುಗಳಲ್ಲಿ 2022ರ ಮುಂಗಾರು ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಕೃಷಿ ಇಲಾಖೆಯು ಮೊಬೈಲ್ ಆಯಪ್ ಅವಕಾಶ ಕಲ್ಪಿಸಿದ್ದು ಜಿಲ್ಲೆಯ ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ಆಪ್‌ಲೋಡ್ ಮಾಡಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ಅವರು ತಿಳಿಸಿದ್ದಾರೆ.

ಮೊಬೈಲ್ ಅಪ್‌ನಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳುವ ವಿಧಾನ: ಗೂಗಲ್ ಪ್ಲೇ-ಸ್ಟೋರ್ ನಿಂದ Kharif Farmer Crop – 2022-23 ಡೌನ್‌ಲೋಡ್ ಮಾಡಿಕೊಂಡು, ಆಧಾರ್ ಮೂಲಕ e-KYC ಮಾಡಿ(OTP ನಮೂದಿಸಿ ಆಪ್ ಸಕ್ರಿಯಗೊಳಿಸಿ). ಮೊಬೈಲ್‌ ಸಂಖ್ಯೆ ನಮೂದಿಸಿ ಆಪ್ ಸಕ್ರಿಯಗೊಳಿಸಿ. FRUITS ನಲ್ಲಿರುವಂತೆ ರೈತರ ವಿವರ ಮತ್ತು ಜಮೀನಿನ ವಿವರ ಸ್ವಯಂ ಡೌನ್‌ಲೋಡ್ ಆಗುವುದು. ಬೆಳೆ ಸಮೀಕ್ಷೆ ಮಾಡಲು ಸರ್ವೇ ನಂ. ಆಯ್ಕೆ ಮಾಡಿ.

ರಾಜ್ಯದಲ್ಲಿ ಒಟ್ಟು 3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ – Vishwanews24

ಬೆಳೆ ಹೆಸರು ಮತ್ತು ವಿವರ ನಮೂದಿಸಿ, ಛಾಯಾಚಿತ್ರ ತೆಗೆದು ಮಾಹಿತಿ ಸೇರಿಸಿ ತಮ್ಮ ಜಮೀನಿನಲ್ಲಿ ಬೆಳೆದಿರುವ ಎಲ್ಲಾ ಬೆಳೆಗಳ ವಿವರಗಳನ್ನು ಆಯಾ ಬೆಳೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಮಾಹಿತಿಯನ್ನು ಸೇರಿಸಿ ಒಂದಾದನಂತರ ಒಂದರಂತೆ ಎಲ್ಲ ಸರ್ವೇ ನಂ. ಮಾಹಿತಿಯನ್ನು ಸೇರಿಸಬಹುದು. ಸರ್ವೇ ನಂ. ಬಿಟ್ಟುಹೋಗಿದ್ದಲ್ಲಿ ಆಪ್ ಮೂಲಕವೇ ಸೇರಿಸಬಹುದಾಗಿದೆ. ಬೆಳೆ ಸಮೀಕ್ಷೆ ವರದಿಯಲ್ಲಿ ಬೆಳೆ ವಿವರ ಅಪ್ಲೋಡ್ ಆಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಿ.

ಆಧಾರ್ ಮೂಲಕ e-KYC ಮಾಡಲು ಸಾಧ್ಯವಾಗದಿದ್ದಲ್ಲಿ, ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ, ಬ್ಯಾಂಕ್, ಅಂಚೆ ಕಚೇರಿ, ಆಟಲ್ ಜನಸ್ನೇಹಿ ಕೇಂದ್ರಕ್ಕೆ ತೆರಳಿ ಆಧಾರ್‌ಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಅಪೇಟ್ ಮಾಡಿಸಿ, FRUITS ವಿವರ ಡೌನ್‌ಲೋಡ್ ಆಗದಿದ್ದಲ್ಲಿ ಆಧಾರ್, ಪಹಣಿ, ಬ್ಯಾಂಕ್‌ ಖಾತೆ ಮಾಹಿತಿಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ/ ತೋಟಗಾರಿಕೆ ಇಲಾಖೆ/ ಕಂದಾಯ ಇಲಾಖೆಯನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳಿ.

ದುಬೈನಲ್ಲಿ ಗೋಲ್ಡನ್ ವೀಸಾ ಪಡೆದ ಕನ್ನಡದ ಮೊದಲ ನಟ ಕಿಚ್ಚ ಸುದೀಪ್ – Vishwanews24

ಸರ್ವೇ ನಂ, ಸೇರಿಸಲು ಸಮಸ್ಯೆ ಇದ್ದಲ್ಲಿ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ : 844 844 7715 ಅನ್ನು ಸಂಪರ್ಕಿಸಿ ಅಥವಾ ಕೃಷಿ / ಕಂದಾಯ/ ತೋಟಗಾರಿಕೆ/ ರೇಷ್ಮೆ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾದ ಜಿ.ಎಸ್.ಜಯಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

9 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago