Featured

ರೈತ ಸಮುದಾಯಕ್ಕೆ ಸಿಹಿಸುದ್ದಿ : ಇನ್ಮುಂದೆ ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ – Vishwanews24

ರೈತ ಸಮುದಾಯಕ್ಕೆ ಸಿಹಿಸುದ್ದಿ : ಇನ್ಮುಂದೆ ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ

ಮೈಸೂರು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೊಳವೆಬಾವಿ ಕೊರೆಸಲು, ವಿದ್ಯುತ್ ಸಂಪರ್ಕ, ಪಂಪ್ ಸೆಟ್ ಇನ್ನಿತರ ಸೌಲಭ್ಯ ಕಲ್ಪಿಸಲು ಟೆಂಡರ್ ನೀಡಲಾಗುತ್ತಿತ್ತು. ಆದರೆ ಇದೀಗ ಟೆಂಡರ್ ಪದ್ದತಿಯನ್ನು ತೆಗೆದು ಹಾಕಲಾಗಿದೆ. ಫಲಾನುಭವಿಗಳಿಗೆ ನೇರವಾಗಿ ಕೊಡುವ ಹಣದಲ್ಲಿ ಬೊರ್ ವೆಲ್ ಕೊರೆಸುವುದು ಪಂಪ್ ಸೆಟ್ ಖರೀದಿ ಸೇರಿದಂತೆ ಎಲ್ಲ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇನ್ನು ಕೊಳವೆ ಬಾವಿ ಸೌಲಭ್ಯಪಡೆಯಲು ಯಾವುದೇ ವಯಸ್ಸಿನ ಮಿತಿ ಇಲ್ಲದೆ ಎಲ್ಲರೂ ಅರ್ಜಿ ಸಲ್ಲಿಸಬಹುದು. ಪ್ರಸಕ್ತ ವರ್ಷದಲ್ಲಿ 1,700 ಕೊಳವೆಬಾವಿ ಕೊರೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

8 minutes ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

19 minutes ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

27 minutes ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

35 minutes ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

42 minutes ago

ದಸರಾ ಸಂಭ್ರಮಕ್ಕೆ KSRTC ವಿಶೇಷ ಟೂರ್ ಪ್ಯಾಕೇಜ್: ಅ.11ರಿಂದ 20ರವರೆಗೆ ಮಂಗಳೂರಿನಿಂದ ವಿಶೇಷ ಬಸ್ ಸೇವೆ – vishwanews24

ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…

48 minutes ago