ಮಡಿಕೇರಿ : ರಾಜ್ಯದ 33 ಲಕ್ಷ ಹೊಸ ರೈತರಿಗೆ ಸಾಲ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಬಜೆಟಿನಲ್ಲಿ ಪ್ರಕಟಿಸಿದ್ದಾರೆ. ಸ್ವಸಹಾಯ ಗುಂಪುಗಳಿಗೆ ಹಾಗೂ ಇತರರಿಗೆ ಸಾಲ ನೀಡಲಾಗುತ್ತದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.
ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತ ಸಹಕಾರ ಭವನದಲ್ಲಿ ಸೋಮವಾರ ನಡೆದ ‘ಕುಶಾಲನಗರ ಸಹಕಾರ ಸಂಘದ ಶತಮಾನೋತ್ಸವ’ ಸಮಾರಂಭ ಹಾಗೂ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಮಾದರಿಯಲ್ಲಿ ಕೆಲವು ಬದಲಾವಣೆಗಳೊಂದಿಗೆ ಸುಲಭ ವ್ಯವಸ್ಥೆಯಲ್ಲಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರಲು ಯೋಚಿಸಲಾಗಿದೆ ಎಂದು ಸಹಕಾರ ಸಚಿವರು ನುಡಿದರು. ರಾಜ್ಯದಲ್ಲಿ ಸುಮಾರು 9 ಲಕ್ಷ ಮಹಿಳಾ ಹಾಲು ಉತ್ಪಾದಕರು ಸೇರಿದಂತೆ ಒಟ್ಟು 26 ಲಕ್ಷ ಹಾಲು ಉತ್ಪಾದಕರಿಗೆ ಸುಗಮವಾಗಿ ಸಾಲ ಸೌಲಭ್ಯ ದೊರೆಯುವಂತಾಗಲು ಅಗತ್ಯ ಕ್ರಮವಹಿಸಲಾಗಿದೆ ಎಂದರು.
ರಾಜ್ಯದಲ್ಲಿ 6 ಸಾವಿರ ಕೋಟಿ ರೂ. ಗೂ ಹೆಚ್ಚು ಸಾಲ ಮನ್ನಾ ಮಾಡಲಾಗಿದೆ. ಇನ್ನೂ 31 ಸಾವಿರ ರೈತರ ಸಾಲ ಮನ್ನಾಕ್ಕೆ ಬಾಕಿ ಇದ್ದು, ಈ ಸಂಬಂಧ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ ಎಂದು ಸಹಕಾರ ಸಚಿವರು ಹೇಳಿದರು. ರಾಜ್ಯದಲ್ಲಿ 21 ಡಿಸಿಸಿ ಬ್ಯಾಂಕ್‍ಗಳು ಇದ್ದು, 5,477 ಪ್ಯಾಕ್ಸ್ ಸಹಕಾರ ಸಂಘಗಳು ಇವೆ. ಎಲ್ಲಾ ಸಹಕಾರ ಸಂಘಗಳು ಉತ್ತಮವಾಗಿ ನಡೆಯುತ್ತಿದ್ದು, ಶೇ.99 ರಷ್ಟು ಸಾಲವನ್ನು ಮರುಪಾವತಿ ಮಾಡಲಾಗುತ್ತಿದೆ ಎಂದರು.
33 ಲಕ್ಷ ಹೊಸ ರೈತರಿಗೆ ಸಾಲ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಬಜೆಟಿನಲ್ಲಿ ಪ್ರಕಟಿಸಿದ್ದಾರೆ. ಸ್ವಸಹಾಯ ಗುಂಪುಗಳಿಗೆ ಹಾಗೂ ಇತರರಿಗೆ ಸಾಲ ನೀಡಲಾಗುತ್ತದೆ ಎಂದು ಸಹಕಾರ ಸಚಿವರು ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…