ನವದೆಹಲಿ: ರೈಲು ಪ್ರಯಾಣ ಪ್ರಿಯರಿಗೆ ರೈಲ್ವೆ ಇಲಾಖೆ ಗುಡ್‌ನ್ಯೂಸ್ ನೀಡಿದೆ. ಇದೀಗ ಬುಕ್ ಆದ ಟಿಕೆಟ್‌ನ ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಇಲ್ಲಿಯವರೆಗೆ ಒಮ್ಮೆ ರೈಲ್ವೆ ಟಿಕೆಟ್ ಬುಕ್ ಮಾಡಿದರೆ ಪ್ರಯಾಣದ ದಿನಾಂಕ ಬದಲಾವಣೆಗೆ ಅವಕಾಶ ಇರಲಿಲ್ಲ. ಆದರೆ ಇದೀಗ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ ಇರಲಿದೆ.
ಮೊದಲೆಲ್ಲ ಟಿಕೆಟ್ ಬುಕಿಂಗ್ ಆದ್ರೆ, ದಿನಾಂಕ ಬದಲಾವಣೆಗೆ ಮೊದಲಿನ ಬುಕಿಂಗ್ ರದ್ದು ಮಾಡಿ, ನಂತರ ಹೊಸ ಟಿಕೆಟ್ ಬುಕಿಂಗ್ ಮಾಡಬೇಕಿತ್ತು. ಆದರೆ ರೈಲ್ವೆ ಇಲಾಖೆ ಈ ನಿಯಮ ಬದಲಾವಣೆಗೆ ಮುಂದಾಗಿದೆ. ದಿನಾಂಕ ಬದಲಾವಣೆಗೆ ಯಾವುದೇ ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ತಿಳಿಸಿದೆ.
ಅಲ್ಲದೇ ರದ್ದತಿ ವೇಳೆ ಆಗುವ ಹಣ ಕಡಿತದಂತೆ ಇಲ್ಲಿ ಆಗುವುದಿಲ್ಲ ಎನ್ನುವ ಮೂಲಕ ರೈಲ್ವೆ ಟಿಕೆಟ್ ಬುಕಿಂಗ್ ವೇಳೆ ಇದ್ದ ನಿಯಮ ಸಡಿಲಿಕೆಗೆ ಇಲಾಖೆ ಮುಂದಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…