Featured

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸಬಾರದು : ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ – vishwanews24

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸಬಾರದು : ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ಮಂಗಳೂರು : ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ  ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಕ್ಷಣವೇ, ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ವಿಚಾರವನ್ನು ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತಂದಿದ್ದರು.

‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್​ಟಿಕೆಟ್​ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಎಕ್ಸ್​ ಸಂದೇಶದ ಮೂಲಕ ಬ್ರಿಜೇಶ್ ಚೌಟ ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ, ಧಾರವಾಡ ಮತ್ತು ಬೀದರ್ ಜಿಲ್ಲೆಗಳಲ್ಲಿ ಕರ್ನಾಟಕ ಸಿಇಟಿ ಪರೀಕ್ಷೆಗೆ ಹಾಜರಾದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಕರ್ನಾಟಕದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಸದ್ಯ ಕರ್ನಾಟಕ ಹೈಕೋರ್ಟ್​​​ನಲ್ಲಿ ಪಿಎಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಕೂಡ ಸಲ್ಲಿಕೆಯಾಗಿದೆ. ಇಂಥ ಸಂದರ್ಭದಲ್ಲೇ ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಯ ಪ್ರವೇಶ ಪತ್ರ ಕೂಡ ವಿವಾದಕ್ಕೆ ಗುರಿಯಾಗಿತ್ತು.

ರೈಲ್ವೆ ನೇಮಕಾತಿ ಮಂಡಳಿ ಕ್ರಮದ ವಿರುದ್ಧ ವಿಎಚ್​​ಪಿ ಮುಖಂಡ ಶರಣ್ ಪಂಪುವೆಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಹಿಂದೂಗಳ ಭಾವನೆಗೆ ಧಕ್ಕೆಬಾರದ ರೀತಿಯಲ್ಲಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಸಂಸದರು ಹಾಗೂ ಸರ್ಕಾರವನ್ನು ಆಗ್ರಹಿಸಿದ್ದರು. ಇದೀಗ ಅಂತಿಮವಾಗಿ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವರ ಮಧ್ಯ ಪ್ರವೇಶದಿಂದ ಸಮಸ್ಯೆ ಬಗೆಹರಿದಿದೆ.

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆ ಯಾವಾಗ?
ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಏಪ್ರಿಲ್ 28, 29 ಹಾಗೂ 30 ರಂದು ನಡೆಯಲಿದೆ. ಮಂಗಳೂರಿನಲ್ಲಿ ಬೋಂದೆಲ್​ನ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

13 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

22 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

22 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

22 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago