Featured

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – vishwanews24

ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ

ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು ಬಹು ಬೇಡಿಕೆಯ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 1ರಿಂದ ಈ ರೈಲಿನ ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಈ ಯೋಜನೆಗೆ ಏಪ್ರಿಲ್ 16ರಂದು ಅನುಮೋದನೆ ದೊರಕಿತ್ತು. ಆ ಮೂಲಕ ಬೆಂಗಳೂರು-ಮುಂಬೈ ನಡುವಿನ ರೈಲು ಪ್ರಯಾಣ ಇನ್ನಷ್ಟು ಆರಾಮದಾಯಕವಾಗಲಿದೆ.

ಈ ಸ್ಲೀಪರ್ ರೈಲು ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ (CSMT)ವರೆಗೆ ಸಂಚರಿಸಲಿದ್ದು, ಸೊಲ್ಲಾಪುರ ಮತ್ತು ಕಲಬುರಗಿ ಮಾರ್ಗವಾಗಿ ತೆರಳಲಿದೆ. ಸಂಜೆ ವೇಳೆಗೆ ಹೊರಡುವ ರೈಲು ಮರುದಿನ ಬೆಳಗ್ಗೆ ಗಮ್ಯಸ್ಥಾನ ತಲುಪುವಂತೆ ವೇಳಾಪಟ್ಟಿ ಇರಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: 

ವಂದೇ ಭಾರತ್ ಸ್ಲೀಪರ್ ಸೇವೆಯಿಂದ ಪ್ರಯಾಣದ ಈ ಸಮಯ ಸುಮಾರು 15 ಗಂಟೆಗೆ ಇಳಿಕೆಯಾಗುವ ನಿರೀಕ್ಷೆಯಿದೆ. ಈ ರೈಲು 16 ಬೋಗಿಗಳನ್ನು ಹೊಂದಿದ್ದು, ದೀರ್ಘ ದೂರ ಪ್ರಯಾಣಕ್ಕೆಂದೇ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಗರಿಷ್ಠ 180 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ವಂದೇ ಭಾರತ್ ಸ್ಲೀಪರ್ ರೈಲಿಗಿದೆ. ಪ್ರಯಾಣಿಕರಿಗೆ ಮಲಗಲು ಉತ್ತಮ ವ್ಯವಸ್ಥೆ, ಸ್ವಚ್ಛ ಬೋಗಿಗಳು ಹಾಗೂ ಸುಧಾರಿತ ಸೌಲಭ್ಯಗಳು ಲಭ್ಯವಾಗಲಿವೆ. ಈ ರೈಲನ್ನು ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯ ತಂತ್ರಜ್ಞಾನ ಬಳಸಿ BEML ಸಂಸ್ಥೆ ಅಭಿವೃದ್ಧಿಪಡಿಸಿದೆ. ಕಿತ್ತಳೆ ಮತ್ತು ಬೂದು ಬಣ್ಣದ ವಿನ್ಯಾಸ ಹೊಂದಿರುವ ಈ ಸ್ಲೀಪರ್ ರೈಲು ರಾತ್ರಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇದು ದೇಶದ ಎರಡನೇ ವಂದೇ ಭಾರತ್ ಸ್ಲೀಪರ್ ರೈಲು ಆಗಿದ್ದು, ಮೊದಲ ರೈಲು 2026ರ ಜನವರಿಯಲ್ಲಿ ಹೌರಾ (ಕೋಲ್ಕತ್ತಾ) ಮತ್ತು ಕಾಮಾಖ್ಯ ಮಾರ್ಗದಲ್ಲಿ ಆರಂಭಗೊಂಡಿತ್ತು ಎಂದು ಬೆಂಗಳೂರು ನೌ ವರದಿ ಮಾಡಿದೆ.

ಇದನ್ನೂ ಓದಿ:

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago