ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು ಬಹು ಬೇಡಿಕೆಯ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 1ರಿಂದ ಈ ರೈಲಿನ ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಈ ಯೋಜನೆಗೆ ಏಪ್ರಿಲ್ 16ರಂದು ಅನುಮೋದನೆ ದೊರಕಿತ್ತು. ಆ ಮೂಲಕ ಬೆಂಗಳೂರು-ಮುಂಬೈ ನಡುವಿನ ರೈಲು ಪ್ರಯಾಣ ಇನ್ನಷ್ಟು ಆರಾಮದಾಯಕವಾಗಲಿದೆ.
ಈ ಸ್ಲೀಪರ್ ರೈಲು ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ (CSMT)ವರೆಗೆ ಸಂಚರಿಸಲಿದ್ದು, ಸೊಲ್ಲಾಪುರ ಮತ್ತು ಕಲಬುರಗಿ ಮಾರ್ಗವಾಗಿ ತೆರಳಲಿದೆ. ಸಂಜೆ ವೇಳೆಗೆ ಹೊರಡುವ ರೈಲು ಮರುದಿನ ಬೆಳಗ್ಗೆ ಗಮ್ಯಸ್ಥಾನ ತಲುಪುವಂತೆ ವೇಳಾಪಟ್ಟಿ ಇರಲಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:
ವಂದೇ ಭಾರತ್ ಸ್ಲೀಪರ್ ಸೇವೆಯಿಂದ ಪ್ರಯಾಣದ ಈ ಸಮಯ ಸುಮಾರು 15 ಗಂಟೆಗೆ ಇಳಿಕೆಯಾಗುವ ನಿರೀಕ್ಷೆಯಿದೆ. ಈ ರೈಲು 16 ಬೋಗಿಗಳನ್ನು ಹೊಂದಿದ್ದು, ದೀರ್ಘ ದೂರ ಪ್ರಯಾಣಕ್ಕೆಂದೇ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಗರಿಷ್ಠ 180 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ವಂದೇ ಭಾರತ್ ಸ್ಲೀಪರ್ ರೈಲಿಗಿದೆ. ಪ್ರಯಾಣಿಕರಿಗೆ ಮಲಗಲು ಉತ್ತಮ ವ್ಯವಸ್ಥೆ, ಸ್ವಚ್ಛ ಬೋಗಿಗಳು ಹಾಗೂ ಸುಧಾರಿತ ಸೌಲಭ್ಯಗಳು ಲಭ್ಯವಾಗಲಿವೆ. ಈ ರೈಲನ್ನು ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯ ತಂತ್ರಜ್ಞಾನ ಬಳಸಿ BEML ಸಂಸ್ಥೆ ಅಭಿವೃದ್ಧಿಪಡಿಸಿದೆ. ಕಿತ್ತಳೆ ಮತ್ತು ಬೂದು ಬಣ್ಣದ ವಿನ್ಯಾಸ ಹೊಂದಿರುವ ಈ ಸ್ಲೀಪರ್ ರೈಲು ರಾತ್ರಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇದು ದೇಶದ ಎರಡನೇ ವಂದೇ ಭಾರತ್ ಸ್ಲೀಪರ್ ರೈಲು ಆಗಿದ್ದು, ಮೊದಲ ರೈಲು 2026ರ ಜನವರಿಯಲ್ಲಿ ಹೌರಾ (ಕೋಲ್ಕತ್ತಾ) ಮತ್ತು ಕಾಮಾಖ್ಯ ಮಾರ್ಗದಲ್ಲಿ ಆರಂಭಗೊಂಡಿತ್ತು ಎಂದು ಬೆಂಗಳೂರು ನೌ ವರದಿ ಮಾಡಿದೆ.
ಇದನ್ನೂ ಓದಿ:
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…