ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ನಡುವಿನ ಸಮರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಭಂಧಕಾಜ್ಞೆ ಆದೇಶವನ್ನ ಹೈಕೋರ್ಟ್ ತೆರವುಗೊಳಿಸಿ ಆದೇಶ ಹೊರಡಿಸಿದೆ.
ಐಎಎಸ್ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಹೊರಡಿಸಿದ್ದ ನಿರ್ಭಂಧಕಾಜ್ಞೆ ಆದೇಶವನ್ನ ಹೈಕೋರ್ಟ್ ತೆರವುಗೊಳಿಸಿದ್ದು, ಈ ಮೂಲಕ ರೋಹಿಣಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ನಿರ್ಬಂಧಕಾಜ್ಞೆ ತೆರವಿನಿಂದಾಗಿ ತಮ್ಮ ವಿರುದ್ಧ ಮತ್ತೆ ಯಾವ ಆರೋಪಗಳು ಬರುತ್ತವೆ ಎಂಬ ಆತಂಕ ರೋಹಿಣಿ ಸಿಂಧೂರಿಯಲ್ಲಿದೆ.
ಐಪಿಎಸ್ ಅಧಿಕಾರಿ ಡಿ.ರೂಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠವು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ನಿರ್ಬಂಧಕಾಜ್ಞೆ ಆದೇಶವನ್ನು ತೆರವುಗೊಳಿಸಿ ಇಂದು ಆದೇಶ ಹೊರಡಿಸಿದೆ.ರೂಪಾ ಅವರು ನನ್ನ ಖಾಸಗಿ ಮೊಬೈಲ್ ನಂಬರ್ , ಫೋಟೋ, ವಿಳಾಸವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಇದರಿಂದ ಅಪರಿಚಿತರು ನನಗೆ ಕರೆ ಮಾಡಿ ತೊಂದರೆ ನೀಡುತ್ತಿದ್ದಾರೆ.ಇದರಿಂದ ನನ್ನ ವೈಯಕ್ತಿಕ ವಿಚಾರಕ್ಕೆ ಧಕ್ಕೆಯಾಗುತ್ತಿದೆ. ಆದ್ದರಿಂದ . ಡಿ ರೂಪಾ ವಿರುದ್ಧ ‘ ನಿರ್ಬಂಧಕಾಜ್ಞೆ’ ವಿಧಿಸುವಂತೆ ರೋಹಿಣಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…