Featured

ಲಂಚಕ್ಕೆ ಬೇಡಿಕೆ ಪ್ರಕರಣದಲ್ಲಿ ರವಿ ಚನ್ನಣ್ಣನವರ್ ಪಾತ್ರ ಕಂಡುಬಂದಿಲ್ಲ: ಸಿಎಂ ಬೊಮ್ಮಾಯಿ – Vishwanews24

ಲಂಚಕ್ಕೆ ಬೇಡಿಕೆ ಪ್ರಕರಣ : ರವಿ ಚನ್ನಣ್ಣನವರ್ ಪಾತ್ರ ಕಂಡುಬಂದಿಲ್ಲ: ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು: ‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಷರ್ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡ ಪಡೆದ ಪ್ರಕರಣದಲ್ಲಿ ನಿಕಟಪೂರ್ವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ ಪಾತ್ರ ಕಂಡುಬಂದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.‌

ಬಿಜೆಪಿಯ ಎನ್.ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ತಿಬೆಲೆಯ ಆರ್. ಮಂಜುನಾಥ್‌ ಎಂಬವರು ನೀಡಿದ್ದ ದೂರು ಆಧರಿಸಿ ಐಜಿಪಿ ಅವರಿಂದ ತನಿಖೆ ನಡೆಸಲಾಗಿದೆ’ ಎಂದರು.

‘ವಿಜಯಪುರ ಸರ್ಕಲ್ ಇನ್‌ಸ್ಪೆಕ್ಟರ್‌ ಟಿ.ಶ್ರೀನಿವಾಸ್, ಎಎಸ್‌ಐಗಳಾದ ಎನ್. ಶುಭಾ, ಕೆ.ಜಿ. ಅನಿತ ಎಂಬವರ ವಿರುದ್ಧ ದೂರು ಕೇಳಿಬಂದಿತ್ತು. ಈ ಅಧಿಕಾರಿಗಳ ದೂರವಾಣಿ ಕರೆ ಮಾಹಿತಿ ಪಡೆಯಲಾಗಿದೆ. ಕ್ರಷರ್ ಮಾಲೀಕರಿಗೆ ಸಹಾಯ ಮಾಡುವ ಮಾತುಕತೆ ನಡೆಸಿ, ನಂಬಿಸಿ ₹ 5 ಲಕ್ಷ ಪಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಕಾರಣಕ್ಕೆ ಟಿ. ಶ್ರೀನಿವಾಸ್ ಅವರನ್ನು ಅಮಾನತು ಮಾಡಲಾಗಿದೆ. ಎಎಸ್‌ಐಗಳ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ. ವಿಚಾರಣೆಯಲ್ಲಿ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪಾತ್ರ ಕಂಡುಬಂದಿಲ್ಲ’ ಎಂದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago