ಬೆಂಗಳೂರು: ‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಷರ್ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡ ಪಡೆದ ಪ್ರಕರಣದಲ್ಲಿ ನಿಕಟಪೂರ್ವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ ಪಾತ್ರ ಕಂಡುಬಂದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬಿಜೆಪಿಯ ಎನ್.ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ತಿಬೆಲೆಯ ಆರ್. ಮಂಜುನಾಥ್ ಎಂಬವರು ನೀಡಿದ್ದ ದೂರು ಆಧರಿಸಿ ಐಜಿಪಿ ಅವರಿಂದ ತನಿಖೆ ನಡೆಸಲಾಗಿದೆ’ ಎಂದರು.
‘ವಿಜಯಪುರ ಸರ್ಕಲ್ ಇನ್‌ಸ್ಪೆಕ್ಟರ್ ಟಿ.ಶ್ರೀನಿವಾಸ್, ಎಎಸ್‌ಐಗಳಾದ ಎನ್. ಶುಭಾ, ಕೆ.ಜಿ. ಅನಿತ ಎಂಬವರ ವಿರುದ್ಧ ದೂರು ಕೇಳಿಬಂದಿತ್ತು. ಈ ಅಧಿಕಾರಿಗಳ ದೂರವಾಣಿ ಕರೆ ಮಾಹಿತಿ ಪಡೆಯಲಾಗಿದೆ. ಕ್ರಷರ್ ಮಾಲೀಕರಿಗೆ ಸಹಾಯ ಮಾಡುವ ಮಾತುಕತೆ ನಡೆಸಿ, ನಂಬಿಸಿ ₹ 5 ಲಕ್ಷ ಪಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಕಾರಣಕ್ಕೆ ಟಿ. ಶ್ರೀನಿವಾಸ್ ಅವರನ್ನು ಅಮಾನತು ಮಾಡಲಾಗಿದೆ. ಎಎಸ್‌ಐಗಳ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ. ವಿಚಾರಣೆಯಲ್ಲಿ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪಾತ್ರ ಕಂಡುಬಂದಿಲ್ಲ’ ಎಂದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…