ಮಂಗಳೂರು : ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗೂಳಿ ಅವರಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ ಸಜೆ ಹಾಗೂ ₹ 1 ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ.
ಶಿವಲಿಂಗ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ವಿಶ್ವಾಸಾರ್ಹ ಮೂಲಗಳು ನೀಡಿದ ಮಾಹಿತಿ ಆಧರಿಸಿ ಲೋಕಾಯುಕ್ತ ಪೊಲೀಸರು 2013ರ ಫೆಬ್ರವರಿ 15ರಂದು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ‘ಆದೇಶ ಪ್ರಕಟವಾದ ಬಳಿಕ ಕೊಂಡಗೂಳಿಯನ್ನು ಬಂಧಿಸಿ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಅವರು ಆದಾಯಕ್ಕಿಂತ ಶೇ 237.5ರಷ್ಟು ಹೆಚ್ಚು ಆಸ್ತಿ ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿತ್ತು.
ಪಡುಬಿದ್ರಿ : ಎಂಡ್ ಪಾಯಿಂಟ್ ಬೀಚ್ ಗೆ ಮೂರನೇ ಬಾರಿ ‘ಬ್ಲೂಫ್ಲ್ಯಾಗ್’ ಮಾನ್ಯತೆ – Vishwanews24
ಈ ಹಿನ್ನಲೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ ಸಜೆ ಹಾಗೂ ₹ 1 ಕೋಟಿ ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ದಂಡ ಕಟ್ಟಲು ಶಿವಲಿಂಗ ವಿಫಲ ನಾದರೆ ಮತ್ತೆ ಒಂದು ವರ್ಷ ಸಾದಾ ಸಜೆ ಅನುಭವಿಸಬೇಕು ಎಂದು ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ತೀರ್ಪಿನಲ್ಲಿ ಹೇಳಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…