ಮಂಗಳೂರು : ಲಂಚ ಪಡೆದು ಮೀತಿ ಮೀರಿ ಆದಾಯ ಸಂಪಾದನೆ ಮಾಡಿದ ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯ ಆರೋಪ ಸಾಭೀತಾಗಿದ್ದು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿದೆ.
ಮಂಗಳೂರು ಮನಪಾ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿ (50) ಶಿಕ್ಷೆಗೊಳಗಾದ ಅಪರಾಧಿ. ಮಂಜುನಾಥ ಸ್ವಾಮಿ ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದಾರೆಂಬ ಆಪಾದನೆ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು 2007 ರಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಬಗ್ಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ ಅಂತಿಮ ತೀರ್ಪು ನೀಡಿದ್ದಾರೆ. ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1 ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ. ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ.ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…