ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಬಂಧನದ ಭೀತಿಯಲ್ಲಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಕೋರಿ ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ವಿರೂಪಾಕ್ಷಪ್ಪ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಅವರ ಪರ ವಕೀಲರು ಮನವಿ ಮಾಡಿದ್ದಾರೆ.
ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠವು ಮಂಗಳವಾರ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿದೆ.
40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ವಿರೂಪಾಕ್ಷಪ್ಪ ಅವರ ಮಗ, ಬೆಂಗಳೂರು ಜಲಮಂಡಳಿಯ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದರು. ಗುರುವಾರ ತಡ ರಾತ್ರಿ ಬೆಂಗಳೂರು ತಲುಪಿದ್ದ ಮಾಡಾಳ್ ವಿರೂಪಾಕ್ಷಪ್ಪ ಬಳಿಕ ತಲೆಮರೆಸಿಕೊಂಡಿದ್ದಾರೆ. ಲೋಕಾಯುಕ್ತ ಪೊಲೀಸರು ಹಲವು ತಂಡಗಳಲ್ಲಿ ಅವರಿಗಾಗಿ ಶೋಧ ನಡೆಸುತ್ತಿದ್ದಾರೆ.
ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಮೊದಲನೇ ಆರೋಪಿಯಾಗಿದ್ದು, ಅವರಿಗಾಗಿ ಲೋಕಾಯುಕ್ತ ಪೊಲೀಸರು ವಿವಿಧೆಡೆ ಶೋಧ ನಡೆಸುತ್ತಿದ್ದಾರೆ.
ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.5ರಂದು ಮಂಗಳೂರು ನಗರದ…
ಶ್ರೀನಗರ : ಪಾರ್ಕಿಂಗ್ ಮಾಡುವ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ; ತಪ್ಪಿದ ಭಾರೀ ಅವಘಡ ಶ್ರೀನಗರ: ನವಿ…
ಪಣಂಬೂರು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು ಸುರತ್ಕಲ್: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್…
ವಿಜಯ್ ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ; ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ : ನಾಗರತ್ನ ಪ್ರತಿಕ್ರಿಯೆ ಬೆಂಗಳೂರು: ನಟ ದುನಿಯಾ…
ಪಡುಬಿದ್ರಿ : ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ; ಸವಾರ ಸಾವು ಉಡುಪಿ: ನಂದಿಕೂರಿನ ಕಾರ್ಕಳ–ಪಡುಬಿದ್ರಿ ಬಸ್ ನಿಲ್ದಾಣದ…
ಸೆ. 5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಮಂಗಳೂರು : ಬೆಂಗಳೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ…