ಮಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಕಾಮಗಾರಿ ಮಂಜೂರಾತಿಗೆ ಲಂಚ ಕೇಳಿದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಎಂಬಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡದ ಎರಡು ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಯ ಟೆಂಡರ್ ಆದಂ ಎಂಬವರು ಅವರ ತಂದೆ ಪರವಾಗಿ ಬಿಡ್ಡ್ ಮಾಡಿದ್ದರು. ತಾಂತ್ರಿಕ ಬಿಡ್ಡನ್ನು ತೆರೆದಾಗ ಕಾಮಗಾರಿಯು ಆದಂ ತಂದೆಯವರಿಗೆ ಮಂಜೂರಾಗಿರುತ್ತದೆ.
ಬಳಿಕ ಸುಮಾರು 10 ದಿನಗಳ ಹಿಂದೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಟೆಕ್ನಿಕಲ್ ಅಸಿಸ್ಟೆಂಟ್ ರವರಾದ ಸೂರ್ಯನಾರಾಯಣ್ ಭಟ್ ರವರು ಮಂಗಳೂರಿನ ಕಛೇರಿಯಿಂದ ಅದೆ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಸುಧೀನ್ ಎಂಬವರ ಮೊಬೈಲ್ ನಿಂದ ಕಾಲ್ ಮಾಡಿ ಈ ನಿಮ್ಮ ಕಾಮಗಾರಿಯ ಫೈನಾನ್ಸಿಯಲ್ ಬಿಡ್ ತೆರೆಯಲು ಟೆಂಡರ್ ಮೊತ್ತದ 1% ಹಣವನ್ನು ಅಂದರೆ ರೂಪಾಯಿ 50,000/- ಸಾವಿರ ಹಣವನ್ನು ಅವರ ಕಛೇರಿಯ ಸೂಪರಿಡೆಂಟ್ ಇಂಜಿನಿಯರ್(S.E) ರವರಾದ ರವೀಂದ್ರ ಕಿಣಿಯವರು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. .
ನಂತರ ಮಂಗಳೂರು ಎಸಿಬಿ ಕಛೇರಿಗೆ ಆದಂ ಹೋಗಿ ಮೂವರು ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳ ಮಂಗಳೂರು ಮಹಾನಗರದ ಕಟ್ಟಡದಲ್ಲಿ ಈ ಇಬ್ಬರು ಅಧಿಕಾರಿಗಳು ಆದಂ ಅವರ ಬಳಿಯಲ್ಲಿ ಲಂಚ 25,000/- ಸಾವಿರ ಹಣವನ್ನು ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಇಬ್ಬರನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…