Featured

ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ

ಮಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಕಾಮಗಾರಿ ಮಂಜೂರಾತಿಗೆ ಲಂಚ ಕೇಳಿದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಎಂಬಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡದ ಎರಡು ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಯ ಟೆಂಡರ್ ಆದಂ ಎಂಬವರು ಅವರ ತಂದೆ ಪರವಾಗಿ ಬಿಡ್ಡ್ ಮಾಡಿದ್ದರು. ತಾಂತ್ರಿಕ ಬಿಡ್ಡನ್ನು ತೆರೆದಾಗ ಕಾಮಗಾರಿಯು ಆದಂ ತಂದೆಯವರಿಗೆ ಮಂಜೂರಾಗಿರುತ್ತದೆ.

ಬಳಿಕ ಸುಮಾರು 10 ದಿನಗಳ ಹಿಂದೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಟೆಕ್ನಿಕಲ್ ಅಸಿಸ್ಟೆಂಟ್ ರವರಾದ ಸೂರ್ಯನಾರಾಯಣ್ ಭಟ್ ರವರು ಮಂಗಳೂರಿನ ಕಛೇರಿಯಿಂದ ಅದೆ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಸುಧೀನ್ ಎಂಬವರ ಮೊಬೈಲ್ ನಿಂದ ಕಾಲ್ ಮಾಡಿ ಈ ನಿಮ್ಮ ಕಾಮಗಾರಿಯ ಫೈನಾನ್ಸಿಯಲ್ ಬಿಡ್ ತೆರೆಯಲು ಟೆಂಡರ್ ಮೊತ್ತದ 1% ಹಣವನ್ನು ಅಂದರೆ ರೂಪಾಯಿ 50,000/- ಸಾವಿರ ಹಣವನ್ನು ಅವರ ಕಛೇರಿಯ ಸೂಪರಿಡೆಂಟ್ ಇಂಜಿನಿಯರ್(S.E) ರವರಾದ ರವೀಂದ್ರ ಕಿಣಿಯವರು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. .

ನಂತರ ಮಂಗಳೂರು ಎಸಿಬಿ ಕಛೇರಿಗೆ ಆದಂ ಹೋಗಿ ಮೂವರು ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳ ಮಂಗಳೂರು ಮಹಾನಗರದ ಕಟ್ಟಡದಲ್ಲಿ ಈ ಇಬ್ಬರು ಅಧಿಕಾರಿಗಳು ಆದಂ ಅವರ ಬಳಿಯಲ್ಲಿ ಲಂಚ 25,000/- ಸಾವಿರ ಹಣವನ್ನು ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಇಬ್ಬರನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago