ಮಂಗಳೂರು: ವ್ಯಕ್ತಿಯೊಬ್ಬರ ಸ್ಕೂಟರ್‌ನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆ ಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ನ್ಯಾಯಾಲಯದ ಆದೇಶದಂತೆ ಸ್ಕೂಟರ್ ಬಿಡುಗಡೆಗೊಳಿಸಲು ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ರನ್ನು ಭೇಟಿಯಾದಾಗ 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚದ ಹಣ ಕಡಿಮೆ ಮಾಡಿ ಎಂದಾಗ ಮುಹಮ್ಮದ್ ಶರೀಫ್ ಠಾಣೆಯ ರೈಟರ್ ಕೂಡ ಆಗಿರುವ ಹೆಡ್‌ಕಾನ್‌ಸ್ಟೇಬಲ್ ನಾಗರತ್ನರನ್ನು ಭೇಟಿ ಮಾಡಲು ಸೂಚಿಸಿದರು. ಅದರಂತೆ ನಾಗರತ್ನರನ್ನು ಭೇಟಿಯಾದಾಗ ಅವರು ಸ್ಕೂಟರ್ ಸವಾರನಿಗೆ ಅವಾಚ್ಯ ಶಬ್ದದಿಂದ ಬೈದು 3,000 ರೂ. ಲಂಚಕ್ಕೆ ಬೇಡಿಕೆ ಇಟ್ಟರು ಎನ್ನಲಾಗಿದೆ. ಆದರೆ ಹಣ ಕೊಡಲು ಒಲ್ಲದ ಸ್ಕೂಟರ್ ಸವಾರನು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣಿಗೆ ದೂರು ನೀಡಿದ್ದರು.
ಸೋಮವಾರ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕ 3,000 ರೂ. ಲಂಚದ ಹಣವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ಇಲಾಖೆಯ ಪ್ರಭಾರ ಅಧೀಕ್ಷಕ ಡಾ.ನಂದಿನಿ ಬಿ.ಎನ್. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ ಕುಮಾರ್, ಇನ್‌ಸ್ಪೆಕ್ಟರ್‌ಗಳಾದ ಅಮಾನುಲ್ಲಾ ಎ, ಚಂದ್ರಶೇಖರ್ ಕೆ.ಎನ್. ಮತ್ತು ಉಡುಪಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಂಜುನಾಥ ಪಾಲ್ಗೊಂಡಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…