Featured

ಲಂಚ ಸ್ವೀಕಾರ ಆರೋಪ: ಮಂಗಳೂರು ಉತ್ತರ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಸಹಿತ ಇಬ್ಬರ ಬಂಧನ – vishwanews24

ಲಂಚ ಸ್ವೀಕಾರ ಆರೋಪ: ಮಂಗಳೂರು ಉತ್ತರ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಸಹಿತ ಇಬ್ಬರ ಬಂಧನ

ಮಂಗಳೂರು: ವ್ಯಕ್ತಿಯೊಬ್ಬರ ಸ್ಕೂಟರ್‌ನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆ ಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ನ್ಯಾಯಾಲಯದ ಆದೇಶದಂತೆ ಸ್ಕೂಟರ್ ಬಿಡುಗಡೆಗೊಳಿಸಲು ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್‌ ರನ್ನು ಭೇಟಿಯಾದಾಗ 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚದ ಹಣ ಕಡಿಮೆ ಮಾಡಿ ಎಂದಾಗ ಮುಹಮ್ಮದ್ ಶರೀಫ್ ಠಾಣೆಯ ರೈಟರ್ ಕೂಡ ಆಗಿರುವ ಹೆಡ್‌ಕಾನ್‌ಸ್ಟೇಬಲ್ ನಾಗರತ್ನರನ್ನು ಭೇಟಿ ಮಾಡಲು ಸೂಚಿಸಿದರು. ಅದರಂತೆ ನಾಗರತ್ನರನ್ನು ಭೇಟಿಯಾದಾಗ ಅವರು ಸ್ಕೂಟರ್ ಸವಾರನಿಗೆ ಅವಾಚ್ಯ ಶಬ್ದದಿಂದ ಬೈದು 3,000 ರೂ. ಲಂಚಕ್ಕೆ ಬೇಡಿಕೆ ಇಟ್ಟರು ಎನ್ನಲಾಗಿದೆ. ಆದರೆ ಹಣ ಕೊಡಲು ಒಲ್ಲದ ಸ್ಕೂಟರ್ ಸವಾರನು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣಿಗೆ ದೂರು ನೀಡಿದ್ದರು.

ಸೋಮವಾರ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕ 3,000 ರೂ. ಲಂಚದ ಹಣವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಲೋಕಾಯುಕ್ತ ಪೊಲೀಸ್ ಇಲಾಖೆಯ ಪ್ರಭಾರ ಅಧೀಕ್ಷಕ ಡಾ.ನಂದಿನಿ ಬಿ.ಎನ್. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ ಕುಮಾರ್, ಇನ್‌ಸ್ಪೆಕ್ಟರ್‌ಗಳಾದ ಅಮಾನುಲ್ಲಾ ಎ, ಚಂದ್ರಶೇಖರ್ ಕೆ.ಎನ್. ಮತ್ತು ಉಡುಪಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಂಜುನಾಥ ಪಾಲ್ಗೊಂಡಿದ್ದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

3 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

3 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

7 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago