ಮಂಗಳೂರು,; ೯೪ ಸಿ ಅಡಿ ಜಾಗ ಮಂಜೂರಾತಿಗೆ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.
ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮಹಿಳೆಯೊಬ್ಬರ ದೂರಿನ ಮೇರೆಗೆ, ಪುತ್ತಿಲ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಕುಮಾರ್ ಮಹಿಳೆಯಿಂದ ೫೦೦೦ ರೂ, ಲಂಚದ ಹಣವನ್ನು ಸ್ವೀಕರಿಸುವಾಗ ಎಪ್ರಿಲ್ ೫ ರಂದು ಎಸಿಬಿ ಪೊಲೀಸರಿಗೆ ರೆಡ್‌ಹಾಂಡ್ ಆಗಿ ಟ್ರ್ಯಾಪ್ ಆಗಿರುತ್ತಾರೆ.
ಮಹಿಳೆಯು ೯೪-ಸಿ ಅಡಿಯಲ್ಲಿ ಜಾಗ ಮಂಜೂರಿಗಾಗಿ ಅರ್ಜಿ ಸಲ್ಲಿಸಿದ್ದು ಸುಮಾರು ಒಂದೂವರೆ ವರ್ಷ ಆದರೂ ಅವರ ಅರ್ಜಿಯನ್ನು ಗ್ರಾಮ ಲೆಕ್ಕಾಧಿಕಾರಿಯವರು ಬಾಕಿ ಇಟ್ಟುಕೊಂಡು ಪ್ರತಿ ಸಲ ಹೋಗಿ ಕೇಳಿದಾಗ ಲಂಚದ ಹಣಕ್ಕೆ ಬೇಡಿಕೆ ಇಟ್ಟು ಕಾಲ ವಿಳಂಬ ಮಾಡಿದ್ದರು. ಅರ್ಜಿದಾರರಿಂದ ಈ ಹಿಂದೆ ರೂ ೩.೦೦೦ ಕೆಲಸದ ಪ್ರಯುಕ್ತ ಲಂಚ ಪಡೆದಿದ್ದರು.
ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯ ಪೊಲೀಸ್ ಅಧೀಕ್ಷಕಿ ಶೃತಿ ಎನ್. ಎಸ್., ಇವರ ಮಾರ್ಗದರ್ಶನದಲ್ಲಿ ಎಸಿಬಿ ಡಿವೈಎಸ್‌ಪಿ ಸುಧೀರ್ ಎಂ ಹೆಗಡೆ ಇವರ ನೇತ್ರೃತ್ವದ ತಂಡದಲ್ಲಿ ಪೊಲೀಸ್ ನಿರೀಕ್ಷಕ ಮೋಹನ್ ಕೊಟ್ಟಾರಿ, ಸಿಬ್ಬಂದಿಯವರಾದ ಹರಿಪ್ರಸಾದ್ ಉಮೇಶ್, ರಾಧಕೃಷ್ಣ, ಪ್ರಶಾಂತ್, ರಾಧಕೃಷ ಡಿ.ಎ, ವೈಶಾಲಿ, ರಾಕೇಶ್, ಗಣೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…