ಜಿಲ್ಲೆ

ಲಂಚ ಸ್ವೀಕಾರ: ವಿಎ ಸೆರೆ

ಮಂಗಳೂರು,;  ೯೪ ಸಿ ಅಡಿ ಜಾಗ ಮಂಜೂರಾತಿಗೆ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.
ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮಹಿಳೆಯೊಬ್ಬರ ದೂರಿನ ಮೇರೆಗೆ, ಪುತ್ತಿಲ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಕುಮಾರ್ ಮಹಿಳೆಯಿಂದ ೫೦೦೦ ರೂ, ಲಂಚದ ಹಣವನ್ನು ಸ್ವೀಕರಿಸುವಾಗ ಎಪ್ರಿಲ್ ೫ ರಂದು ಎಸಿಬಿ ಪೊಲೀಸರಿಗೆ ರೆಡ್‌ಹಾಂಡ್ ಆಗಿ ಟ್ರ್ಯಾಪ್ ಆಗಿರುತ್ತಾರೆ.
ಮಹಿಳೆಯು ೯೪-ಸಿ ಅಡಿಯಲ್ಲಿ ಜಾಗ ಮಂಜೂರಿಗಾಗಿ ಅರ್ಜಿ ಸಲ್ಲಿಸಿದ್ದು ಸುಮಾರು ಒಂದೂವರೆ ವರ್ಷ ಆದರೂ ಅವರ ಅರ್ಜಿಯನ್ನು ಗ್ರಾಮ ಲೆಕ್ಕಾಧಿಕಾರಿಯವರು ಬಾಕಿ ಇಟ್ಟುಕೊಂಡು ಪ್ರತಿ ಸಲ ಹೋಗಿ ಕೇಳಿದಾಗ ಲಂಚದ ಹಣಕ್ಕೆ ಬೇಡಿಕೆ ಇಟ್ಟು ಕಾಲ ವಿಳಂಬ ಮಾಡಿದ್ದರು. ಅರ್ಜಿದಾರರಿಂದ ಈ ಹಿಂದೆ ರೂ ೩.೦೦೦ ಕೆಲಸದ ಪ್ರಯುಕ್ತ ಲಂಚ ಪಡೆದಿದ್ದರು.
ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯ ಪೊಲೀಸ್ ಅಧೀಕ್ಷಕಿ ಶೃತಿ ಎನ್. ಎಸ್., ಇವರ ಮಾರ್ಗದರ್ಶನದಲ್ಲಿ ಎಸಿಬಿ ಡಿವೈಎಸ್‌ಪಿ ಸುಧೀರ್ ಎಂ ಹೆಗಡೆ ಇವರ ನೇತ್ರೃತ್ವದ ತಂಡದಲ್ಲಿ ಪೊಲೀಸ್ ನಿರೀಕ್ಷಕ ಮೋಹನ್ ಕೊಟ್ಟಾರಿ, ಸಿಬ್ಬಂದಿಯವರಾದ ಹರಿಪ್ರಸಾದ್ ಉಮೇಶ್, ರಾಧಕೃಷ್ಣ, ಪ್ರಶಾಂತ್, ರಾಧಕೃಷ ಡಿ.ಎ, ವೈಶಾಲಿ, ರಾಕೇಶ್, ಗಣೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago