Featured

ಲಂಡನ್‌ನಿಂದ ಬೆಳಗಾವಿಗೆ ಆಗಮಿಸಿದ ಮಹಿಳೆ :ಜನರಲ್ಲಿ ಸೋಂಕಿನ ಭೀತಿ -Vishwanews24

ಲಂಡನ್‌ನಿಂದ ಬೆಳಗಾವಿಗೆ ಆಗಮಿಸಿದ ಮಹಿಳೆ :ಜನರಲ್ಲಿ ಸೋಂಕಿನ ಭೀತಿ -Vishwanews24

ಬೆಳಗಾವಿ,: ಬ್ರಿಟನ್ ದೇಶದಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿದೆ. ಈ ನಡುವೆ ಲಂಡನ್‌ನಿಂದ ಮಹಿಳೆಯೊಬ್ಬರು ಬೆಳಗಾವಿಯ ‌ಖಡೇಬಜಾರ್‌ಗೆ ಬಂದಿದ್ದು ಜನರಲ್ಲಿ ಭೀತಿ ಉಂಟಾಗಿದೆ.

ಡಿ.14ರಂದು ಬೆಂಗಳೂರಿನಿಂದ ಜಮಖಂಡಿಗೆ ಬಂದಿರುವ ಈ ಮಹಿಳೆಯು ಸೋಮವಾರ ರಾತ್ರಿ ಇಲ್ಲಿನ ತವರು ಮನೆಗೆ ಆಗಮಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಕೋವಿಡ್ ವಾರ್ ರೂಂನಿಂದ ಮಾಹಿತಿ ದೊರೆತ ಹಿನ್ನೆಲೆ ಆರೋಗ್ಯ ಇಲಾಖೆಯವರು ಮಹಿಳೆಯ ಮನೆಗೆ ತೆರಳಿ ಗಂಟಲು ದ್ರವದ ಮಾದರಿ ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನು ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಎಚ್ಒ ಡಾ.ಎಸ್.ವಿ. ಮುನ್ಯಾಳ, ”ತನ್ನ ತವರು ಮನೆಗೆ ಮಹಿಳೆ ಬಂದಿದ್ದು ಪ್ರಸ್ತುತ ಮಾರ್ಗಸೂಚಿಯ ಅನುಸಾರವಾಗಿ ಮನೆಯಲ್ಲಿ ಪ್ರತ್ಯೇಕವಾಗಿ ಇರಲು ತಿಳಿಸಲಾಗಿದೆ” ಎಂದು ಹೇಳಿದ್ದಾರೆ.

”ಮಹಿಳೆಯ ಗಂಟಲ ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಸ್ತುತ ಅವರು ಒಬ್ಬರೇ ಇಲ್ಲಿಗೆ ಬಂದಿದ್ದಾರೆ ಎಂದು ಮಾಹಿತಿ ಲಭಿಸಿದೆ” ಎಂದು ಕೂಡಾ ಮಾಧ್ಯಮಕ್ಕೆ ತಿಳಿಸಿದ್ದಾರೆ.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

11 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

11 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

12 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

12 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

13 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

13 hours ago