Featured

ಲಂಡನ್ ನಲ್ಲಿ ನೀರವ್ ಮೋದಿ ಬಂಧನ – Vishwanews24

ಲಂಡನ್​: ಪಂಜಾಬ್​ ನ್ಯಾಷನಲ್​ ಬ್ಯಾಂಕ್​ಗೆ ಸಾವಿರಾರು ಕೋಟಿ ರೂಪಾಯಿ ಪಾವತಿಸದೇ ದೇಶ ಬಿಟ್ಟು ಓಡಿಹೋಗಿದ್ದ ವಜ್ರದ ಉದ್ಯಮಿ ನೀರವ್​ ಮೋದಿಯನ್ನು ಲಂಡನ್​ನಲ್ಲಿ ಬಂಧಿಸಲಾಗಿದೆ.

ನೀರವ್​ ಮೋದಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನಿಂದ 13 ಸಾವಿರ ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡದೇ ತಲೆತಪ್ಪಿಸಿಕೊಂಡಿದ್ದರು. ಆದರೀಗ ಅವರನ್ನು ಲಂಡನ್​ನಲ್ಲಿ ಬಂಧನ ಮಾಡಲಾಗಿದ್ದು ಭಾರತದ ಜತೆ ಹಸ್ತಾಂತರ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಎಲ್ಲವೂ ಲೆಕ್ಕಾಚಾರಗಳಂತೆ ನಡೆದರೆ ಮದ್ಯ ದೊರೆ ವಿಜಯ್​ ಮಲ್ಯಾ ಸ್ಥಿತಿಯೇ ನೀರವ್​ ಮೋದಿಗೂ ಬರಲಿದೆ.

ಜಾಮೀನು ಕೋರಿ ನೀರವ್​ ಮೋದಿ ಅರ್ಜಿ ಸಲ್ಲಿಸಬಹುದು. ಕೋರ್ಟ್​ ಜಾಮೀನು ನೀಡಿದರೆ ಅವರ ಬಂಧನ ಅಸಾಧ್ಯವಾಗಲಿದೆ. ಇತ್ತೀಚೆಗೆ ಅವರು ಬೆಲೆಬಾಳುವ ಜಾಕೆಟ್​ ಧರಿಸಿ ಲಂಡನ್​ ಬೀದಿಗಳಲ್ಲಿ ಕಾಣಿಸಿಕೊಂಡಿದ್ದರು.

ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನ 13,000 ಕೋಟಿ ರೂ. ಹಗರಣದ ಪ್ರಮುಖ ಆರೋಪಿ ಆಗಿರುವ ನೀರವ್​ ಲಂಡನ್​ನಲ್ಲಿ ತಲೆಮರಿಸಿಕೊಂಡಿದ್ದರು. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂಗತೆ ಭಾರತ ಕೋರಿತ್ತು. ಕೇಂದ್ರ ಗೃಹಸಚಿವಾಲಯದ ಕಾರ್ಯದರ್ಶಿ ಸಾಜಿದ್​ ಜಾವೀದ್​ ದೃಢೀಕರಿಸಿದ ನಂತರದಲ್ಲಿ ಈ ಬೆಳವಣಿಗೆ ನಡೆದಿತ್ತು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ತನ್ನ ಮುಂಬೈ ಬ್ರ್ಯಾಂಚ್​ ಒಂದರಲ್ಲಿ ಬೃಹತ್ ಮೊತ್ತದ ಅವ್ಯವಹಾರ ನಡೆದಿರುವುದನ್ನು ಪತ್ತೆಹಚ್ಚಿತ್ತು. ಸುಮಾರು 1.77 ಬಿಲಿಯನ್ ಡಾಲರ್ (ಸುಮಾರು 13,000 ಕೋಟಿ ರೂ) ಮೊತ್ತದಷ್ಟು ವಂಚನೆ ಎಸಗಲಾಗಿದೆ ಎಂದು ಸಂಸ್ಥೆ ಹೇಳಿತ್ತು. 2018ರ ಆಗಸ್ಟ್​ ತಿಂಗಳಲ್ಲಿ ನೀರವ್​ ಮೋದಿ ಹಸ್ತಾಂತರಕ್ಕೆ ಭಾರತ ಮನವಿ ಮಾಡಿತ್ತು. ಜೊತೆಗೆ ಭಾರತ ಅವರನ್ನು ಗಡೀಪಾರು ಮಾಡುವಂತೆ ಕೋರಿತ್ತು. ಅಕ್ರಮ ಹಣ ವರ್ಗಾವಣೆ ಸೇರಿ ಅನೇಕ ಪ್ರಕರಣಗಳು ಅವರ ಮೇಲಿವೆ. ಇತ್ತೀಚೆಗೆ ಅವರಿಗೆ ಸೇರಿದ ಐಷಾರಾಮಿ ಕಟ್ಟಡವನ್ನು ನೆಲಸಮ ಮಾಡಲಾಗಿತ್ತು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

5 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

6 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

6 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

7 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

7 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

7 hours ago