Featured

ಲಂಡನ್‌ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್‌; ಭಾರತೀಯರಿಂದ ಪ್ರಶಂಸೆ – Vishwanews24

ಲಂಡನ್‌ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್‌;  ಭಾರತೀಯರಿಂದ ಪ್ರಶಂಸೆ

ಲಂಡನ್: ಬ್ರಿಟನ್ ಪ್ರಧಾನಿ ಅಭ್ಯರ್ಥಿ ಸ್ಪರ್ಧೆಯಲ್ಲಿರುವ ಮಾಜಿ ಬ್ರಿಟಿಷ್ ಹಣಕಾಸು ಸಚಿವ, ಇನ್ಫೋಸಿಸ್ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಲಂಡನ್‍ನಲ್ಲಿ ಗೋ ಪೂಜೆ ಮಾಡಿದ್ದಾರೆ. ಇದೀಗ ಈ ವೀಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಂಗ್ಲೆಂಡ್‌ನಲ್ಲಿ ವಾಸಿಸುವ ಭಾರತೀಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

ಇತ್ತೀಚೆಗಷ್ಟೇ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ಭಕ್ತಿವೇದಾಂತ ಮೇನರ್ ದೇವಾಲಯಕ್ಕೆ ಪತ್ನಿ ಜೊತೆಗೆ ರಿಷಿ ಸುನಕ್ ಅವರು ಭೇಟಿ ನೀಡಿದ್ದರು. ಇದರ ಕೆಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ 2023ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ : ಸಿಎಂ ಬೊಮ್ಮಾಯಿ – Vishwanews24 

ಇದೀಗ ರಿಷಿ ಸುನಕ್ ದಂಪತಿ ಗೋಶಾಲೆಗೆ ಭೇಟಿ ನೀಡಿ, ಹಸುವಿನ ಪೂಜೆ ಮಾಡಿದ್ದಾರೆ. ವಿಡಿಯೋದಲ್ಲಿ ರಿಷಿ ಸುನಕ್- ಅಕ್ಷತಾ ಮೂರ್ತಿ ದಂಪತಿ ಗೋಪೂಜೆಗೆ ಸಿದ್ಧವಾಗಿರುವ ಹಸುವಿನ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಪಾತ್ರೆಯಲ್ಲಿದ್ದ ಪವಿತ್ರವಾದ ನೀರನ್ನು ಹಸುವಿನ ಕಾಲಿನ ಮೇಲೆ ಸಿಂಪಡಿಸಿ ನಂತರ ದಂಪತಿ ಆರತಿ ಬೆಳಗಿದ್ದಾರೆ. ಕೊನೆಗೆ ಹಸುವಿಗೆ ಕೈ ಮುಗಿದು ರಿಷಿ ಸುನಕ್ ನಮಸ್ಕರಿಸಿರುವುದನ್ನು ಕಾಣಬಹುದಾಗಿದೆ.

ರಿಷಿ ಸುನಕ್ ಅವರು ಯಾರ್ಕ್‍ಷೈರ್‍ನ ರಿಚ್‍ಮಂಡ್‍ನಿಂದ ಮೂರನೇ ಬಾರಿಗೆ ಮರು ಆಯ್ಕೆಯಾದಾಗ ಭಗವದ್ಗೀತೆಯನ್ನು ಹಿಡಿದುಕೊಂಡು ಇಂಗ್ಲೆಂಡ್‍ನ ಸಂಸತ್ತಿನಲ್ಲಿ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗೇ, ಅವರು ಚಾನ್ಸಲರ್ ಆಗಿದ್ದಾಗ ದೀಪಾವಳಿ ಹಬ್ಬವನ್ನು ಆಚರಿಸುವ ಮೂಲಕ ಇಂಗ್ಲೆಂಡ್‍ನಲ್ಲಿರುವ ಭಾರತೀಯರ ಮನಗೆದ್ದಿದ್ದರು.ಇದನ್ನೂ ಓದಿ: ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ : ಚಕ್ರವರ್ತಿ ಸೂಲಿಬೆಲೆ – Vishwanews24 

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

6 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

6 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

6 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

7 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

7 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago