Featured

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣ : ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ :  ಹೆಚ್.ಕೆ.ಪಾಟೀಲ್ – vishwanews24

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣ : ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ :  ಹೆಚ್.ಕೆ.ಪಾಟೀಲ್

ಬೆಂಗಳೂರು: ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ ಎಂದು ಗದಗ ಉಸ್ತುವಾರಿ ಮತ್ತು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾತನಾಡಿದ ಅವರು, ಕುಟುಂಬದ ಪ್ರಾಮಾಣಿಕತೆಯನ್ನು ನಾನು ಗೌರವಿಸುತ್ತೇವೆ. ಅದು ನಿಧಿ ಅಲ್ಲ ಕುಟುಂಬದ ಬಂಗಾರ ಎಂದು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಅಲ್ಲಿನ ಎಎಸ್‌ಐ ಅಧಿಕಾರಿ ಸಂತೋಷ್ ಗೊಂದಲ ಮೂಡಿಸುತ್ತಿದ್ದಾರೆ. ಅನಗತ್ಯ ಗೊಂದಲ ಉಂಟು ಮಾಡಿದ ಅಧಿಕಾರಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಭೂಮಿಯ ಒಳ ಯಾವುದೇ ಮೌಲ್ಯಯುತವಾದ ವಸ್ತುಗಳು ಸಿಕ್ಕರು ಅದು ಸರ್ಕಾರದ್ದಾಗಿರುತ್ತದೆ. ಜಿಲ್ಲಾ ಆಡಳಿತ ಆ ಬಂಗಾರವನ್ನು ಖಜಾನೆಯಲ್ಲಿ ಭದ್ರವಾಗಿ ಇರಿಸಿದೆ. ಅದು ಆ ಕುಟುಂಬಕ್ಕೆ ಸೇರಿದ್ದಾ? ಆ ಜಾಗದ ಮೂಲ ಮಾಲಿಕರಿಗೆ ಸೇರಿದ್ದ? ರಾಷ್ಟ್ರ ಕೂಟರ ಕಾಲದ್ದ ಚಾಲುಕ್ಯರ ಕಾಲದ್ದ ಎಲ್ಲವೂ ಪರಿಶೀಲನೆ ಮಾಡಲಾಗುತ್ತದೆ ಎಂದರು.

ನಿಧಿ ಅಂದರೆ ಏನು? ಭೂಮಿಯ ಒಳಗೆ ಸಿಕ್ಕಿದ ಬೆಲೆ ಬಾಳುವ ವಸ್ತು ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆ ಕುಟುಂಬದ ಪ್ರಾಮಾಣಿಕತೆ ಯ‌ನ್ನು ನಾವು ಗೌರವಿಸುತ್ತೇವೆ. ಮುಖ್ಯಮಂತ್ರಿಗಳು ಆ ಕುಟುಂಬವನ್ನು ಅಭಿನಂದಿಸಿದ್ದಾರೆ. ಸರ್ಕಾರದ ವತಿಯಿಂದಲೂ ಆ ಕುಟುಂಬವನ್ನು ಗೌರವಿಸುವ ಕೆಲಸ ಮಾಡುತ್ತೇವೆ. ಸಾಂದರ್ಭಿಕವಾಗಿ ಅವರಿಗೆ ಏನು ಗೌರವಿಸಬೇಕೋ ಅದನ್ನ ಗೌರವಿಸುತ್ತೇವೆ ಎಂದಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago