Featured

ಲಕ್ನೋ:  ಗ್ಯಾಂಗ್‌ ಸ್ಟಾರ್‌ ಅತಿಕ್‌ ಅಹ್ಮದ್‌  ಪುತ್ರ ಅಸಾದ್‌  ಉತ್ತರ ಪ್ರದೇಶ ಪೊಲೀಸರ ಎನ್‌ಕೌಂಟರ್‌ಗೆ ಬಲಿ – Vishwanews24

ಲಕ್ನೋ:  ಗ್ಯಾಂಗ್‌ ಸ್ಟಾರ್‌ ಅತಿಕ್‌ ಅಹ್ಮದ್‌  ಪುತ್ರ ಅಸಾದ್‌  ಉತ್ತರ ಪ್ರದೇಶ ಪೊಲೀಸರ ಎನ್‌ಕೌಂಟರ್‌ಗೆ ಬಲಿ

ಲಕ್ನೋ: ಮಾಜಿ ಸಂಸದ, ಗ್ಯಾಂಗ್‌ ಸ್ಟಾರ್‌ ಅತಿಕ್‌ ಅಹ್ಮದ್‌  ಪುತ್ರ ಅಸಾದ್‌  ಉತ್ತರ ಪ್ರದೇಶ ಪೊಲೀಸರ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ.

ಉಮೇಶ್ ಪಾಲ್ ಹತ್ಯೆ ಪ್ರಕರಣದ  ಪ್ರಮುಖ ಆರೋಪಿಗಳಾದ ಅಸಾದ್‌ ಮತ್ತು ಗುಲಾಂ ತಲೆಗೆ 5 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ನಾಪತ್ತೆಯಾಗಿದ್ದ ಈ ಇಬ್ಬರನ್ನು ಇಂದು ಝಾನ್ಸಿಯಲ್ಲಿ ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಲಾಗಿದೆ.

2005ರ ಬಹುಜನ ಸಮಾಜ ಪಾರ್ಟಿಯ ಶಾಸಕ ರಾಜುಪಾಲ್  ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್  ಅವರನ್ನು ಫೆ.24 ರಂದು ಅತಿಕ್ ಅಹಮ್ಮದ್ ಗ್ಯಾಂಗ್ ಸದಸ್ಯರು ಗುಂಡಿಟ್ಟು ಹತ್ಯೆ ಮಾಡಿದ್ದರು.

ಹತ್ಯೆಯಾದ ಇಬ್ಬರಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏನಿದು ಪ್ರಕರಣ?
2005ರಲ್ಲಿ ಅಲಹಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ನಾಯಕ ರಾಜು ಪಾಲ್ ಗೆದ್ದಿದ್ದರು. ಇದಾದ 1 ತಿಂಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಉಮೇಶ್ ಪಾಲ್ ಪ್ರಮುಖ ಸಾಕ್ಷಿಯಾಗಿದ್ದರು. ಫೆ.24 ರಂದು ಉಮೇಶ್ ಪಾಲ್ ಅವರನ್ನು ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 40 ಜನರನ್ನು ಆರೋಪಿಗಳೆಂದು ಪೊಲೀಸರು ಹೆಸರಿಸಿದ್ದಾರೆ. ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್, ಆತನ ಸಹೋದರ ಮತ್ತು ಮಾಜಿ ಶಾಸಕ ಅಶ್ರಫ್ ರಾಜು ಪಾಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ. ಇವರಿಬ್ಬರೂ ಸದ್ಯ ಜೈಲಿನಲ್ಲಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

10 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

18 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

18 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

18 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

18 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

18 hours ago