Featured

ಲಗ್ನಪತ್ರಿಕೆ ನೀಡುವ ನೆಪದಲ್ಲಿ ಸುಲಿಗೆ ; ಸಾರ್ವಜನಿಕರಿಂದ ಬಿತ್ತು ಗೂಸಾ- Vishwanews24

ಉಡುಪಿ,: : ಮದುವೆ ಆಮಂತ್ರಣ ನೀಡೋ ನೆಪದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ಸುಲಿಗೆ ಮಾಡಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಸಾರ್ವಜನಿಕರು ಸಖತ್ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಘಟನೆ ಕುಂದಾಪುರ ಜಿ .ಎಂ ರೋಡ್ ಮಸೀದಿ ಬಳಿ‌ ನಡೆದಿದೆ. ಕಾಪು ಮಜೂರಿನ ಮಹಿಳೆ ಫಿರ್ದೋಸ್ (29) ಕಾರ್ಕಳ ಕುಂಟಲಪಾಡಿ ನಿವಾಸಿ ಮಹಮ್ಮದ್ ಆಸೀಫ್ ಬಂಧಿತ ಆರೋಪಿಗಳು.

ಆಸೀಫ್ ಕುಂದಾಪುರ ಜಿ.ಎಂ.ರೋಡ್ ನಿವಾಸಿ ಮೆಹರುನ್ನೀಸಾ(74) ಕುಟುಂಬಕ್ಕೆ ಡ್ರೈವರ್ ಆಗಿದ್ದ. ಹಳೆಯ ಪರಿಚಯದ ನೆಪದಲ್ಲಿ ಕುಟುಂಬದ ಮತ್ತು ಮನೆಯ ಆಗು ಹೋಗುಗಳ ಮಾಹಿತಿಯನ್ನು ತಿಳಿದುಕೊಂಡಿದ್ದ. ಇಂದು ಶುಕ್ರವಾರ ಆದ ಕಾರಣ ಮೆಹರುನ್ನೀಸಾ ಅವರ ಪತಿ ಅಬು ಮಹಮ್ಮದ್ ಮಸೀದಿಗೆ ತೆರಳಿದ್ದರು. ಇದೇ ಸಂದರ್ಭ ಮದುವೆ ಆಮಂತ್ರಣ ಪತ್ರಿಕೆ ಕೊಡೋ ನೆಪದಲ್ಲಿ ಮಧ್ಯಾಹ್ನದ ಹೊತ್ತಿಗೆ ಮನೆಗೆ ಬಂದ ಇಬ್ಬರು ಆರೋಪಿಗಳು ಮೆಹರುನ್ನೀಸಾ ಅವರ ಕೈಯನ್ನು ಕಟ್ಟಿ ಕುತ್ತಿಗೆಯಲ್ಲಿದ್ದ ಚಿನ್ನದ ಒಡವೆಗಳನ್ನು ಸುಲಿಗೆ ಮಾಡಲು ಯತ್ನಿಸಿದ್ದಾರೆ. ಇದೇ ಸಂದರ್ಭ ಮೆಹರುನ್ನೀಸಾ ಬೊಬ್ಬೆಯನ್ನು ಕೇಳಿದ ಸಾರ್ವಜನಿಕರು ಆಗಮಿಸಿ ಇಬ್ಬರಿಗೂ ಚೆನ್ನಾಗಿ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಮಹಿಳೆ ಫಿರ್ದೋಸ್ ಆಸೀಫ್ ಜೊತೆ ಸೇರಿ ತನ್ನ ಪತಿ ಸಮೀರ್ ನನ್ನು ತಮಿಳುನಾಡಿಗೆ ಕರೆದುಕೊಂಡು ಮೋಸದಿಂದ ಕೊಲೆ ಗೈದ ಆರೋಪಿಗಳಾಗಿದ್ದಾರೆ.ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ,ಕಳೆದ ತಿಂಗಳಷ್ಟೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ಇಬ್ಬರು ಸೇರಿ ಈ ಕ್ರತ್ಯ ಎಸಗಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago