ಉಡುಪಿ,: : ಮದುವೆ ಆಮಂತ್ರಣ ನೀಡೋ ನೆಪದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ಸುಲಿಗೆ ಮಾಡಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಸಾರ್ವಜನಿಕರು ಸಖತ್ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಘಟನೆ ಕುಂದಾಪುರ ಜಿ .ಎಂ ರೋಡ್ ಮಸೀದಿ ಬಳಿ ನಡೆದಿದೆ. ಕಾಪು ಮಜೂರಿನ ಮಹಿಳೆ ಫಿರ್ದೋಸ್ (29) ಕಾರ್ಕಳ ಕುಂಟಲಪಾಡಿ ನಿವಾಸಿ ಮಹಮ್ಮದ್ ಆಸೀಫ್ ಬಂಧಿತ ಆರೋಪಿಗಳು.
ಆಸೀಫ್ ಕುಂದಾಪುರ ಜಿ.ಎಂ.ರೋಡ್ ನಿವಾಸಿ ಮೆಹರುನ್ನೀಸಾ(74) ಕುಟುಂಬಕ್ಕೆ ಡ್ರೈವರ್ ಆಗಿದ್ದ. ಹಳೆಯ ಪರಿಚಯದ ನೆಪದಲ್ಲಿ ಕುಟುಂಬದ ಮತ್ತು ಮನೆಯ ಆಗು ಹೋಗುಗಳ ಮಾಹಿತಿಯನ್ನು ತಿಳಿದುಕೊಂಡಿದ್ದ. ಇಂದು ಶುಕ್ರವಾರ ಆದ ಕಾರಣ ಮೆಹರುನ್ನೀಸಾ ಅವರ ಪತಿ ಅಬು ಮಹಮ್ಮದ್ ಮಸೀದಿಗೆ ತೆರಳಿದ್ದರು. ಇದೇ ಸಂದರ್ಭ ಮದುವೆ ಆಮಂತ್ರಣ ಪತ್ರಿಕೆ ಕೊಡೋ ನೆಪದಲ್ಲಿ ಮಧ್ಯಾಹ್ನದ ಹೊತ್ತಿಗೆ ಮನೆಗೆ ಬಂದ ಇಬ್ಬರು ಆರೋಪಿಗಳು ಮೆಹರುನ್ನೀಸಾ ಅವರ ಕೈಯನ್ನು ಕಟ್ಟಿ ಕುತ್ತಿಗೆಯಲ್ಲಿದ್ದ ಚಿನ್ನದ ಒಡವೆಗಳನ್ನು ಸುಲಿಗೆ ಮಾಡಲು ಯತ್ನಿಸಿದ್ದಾರೆ. ಇದೇ ಸಂದರ್ಭ ಮೆಹರುನ್ನೀಸಾ ಬೊಬ್ಬೆಯನ್ನು ಕೇಳಿದ ಸಾರ್ವಜನಿಕರು ಆಗಮಿಸಿ ಇಬ್ಬರಿಗೂ ಚೆನ್ನಾಗಿ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಮಹಿಳೆ ಫಿರ್ದೋಸ್ ಆಸೀಫ್ ಜೊತೆ ಸೇರಿ ತನ್ನ ಪತಿ ಸಮೀರ್ ನನ್ನು ತಮಿಳುನಾಡಿಗೆ ಕರೆದುಕೊಂಡು ಮೋಸದಿಂದ ಕೊಲೆ ಗೈದ ಆರೋಪಿಗಳಾಗಿದ್ದಾರೆ.ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ,ಕಳೆದ ತಿಂಗಳಷ್ಟೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ಇಬ್ಬರು ಸೇರಿ ಈ ಕ್ರತ್ಯ ಎಸಗಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…