Featured

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ವಿದ್ಯಾರ್ಥಿಗಳಿಗೆ 500 ಗಿಡ ವಿತರಣೆ – Vishwanews24

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ವಿದ್ಯಾರ್ಥಿಗಳಿಗೆ 500 ಗಿಡ ವಿತರಣೆ

ಉಡುಪಿ : ವನಮಹೋತ್ಸವದಂತಹ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೆ, ನಾವು ನೆಡುವ ಪ್ರತಿ ಗಿಡವು ವೃದ್ಧಿಯಾಗುವಂತೆ ನೋಡಬೇಕು. ಪ್ರಕೃತಿಯಲ್ಲಿ ನಾವು ನೆಟ್ಟ ಗಿಡ ಮರವಾಗಿ ಬೆಳೆದಾಗ ಅದರಿಂದ ನಮಗೂ ನೆಮ್ಮದಿ ಸಿಗುತ್ತದೆ. ವನಮಹೋತ್ಸವದಂತಹ ಕಾರ್ಯಕ್ರಮಗಳು ಪವಿತ್ರ ಕಾರ್ಯಕ್ರಮವೆಂದು ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ಅ. ವಂ. ಫಾ. ಸ್ಟ್ಯಾನಿ ಬಿ ಲೋಬೋ ತಿಳಿಸಿದರು.

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ನೇತೃತ್ವದಲ್ಲಿ ಉದ್ಯಾವರ ಗ್ರಾಮದ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ 500 ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಗಿಡ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಂತ ಫ್ರಾನ್ಸಿಸ್ ಝೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವನಮಹೋತ್ಸವ ಮತ್ತು ಗಿಡ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ, ಕಾರ್ಯಕ್ರಮದ ಪ್ರಾಯೋಜಕರು ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರು ಆಗಿರುವ ಯೋಗೀಶ್ ಕೋಟ್ಯಾನ್ ಮಾತನಾಡುತ್ತಾ, ತಾಪಮಾನ ಹೆಚ್ಚುತ್ತಿರುವ ಈ ಕಾಲಘಟ್ಟದಲ್ಲಿ ಇಂತಹ ಕಾರ್ಯಕ್ರಮಗಳ ಮೂಲಕ ಪರಿಸರವನ್ನು ಉಳಿಸಬಹುದು. ಮಾತ್ರವಲ್ಲದೆ ಕಾಲಕಾಲಕ್ಕೆ ಬೇಕಾದ ಗಾಳಿ ಮಳೆ ನಮಗೆ ದೊರಕುತ್ತದೆ. ವಿದ್ಯಾರ್ಥಿಗಳು ಇಂದು ಪಡಕೊಂಡ ಗಿಡಗಳನ್ನು ತಮ್ಮ ಮನೆಯ ಆವರಣದಲ್ಲಿ ಬೆಳೆಸಿ ಉತ್ತಮ ರೀತಿಯಲ್ಲಿ ಪೋಷಣೆ ಮಾಡಿ. ಮುಂದಿನ ದಿನಗಳಲ್ಲಿ ಒಳ್ಳೆಯ ಗಿಡ ಬೆಳೆಸಿದವರೆಗೆ ಪ್ರೋತ್ಸಾಹ ಧನ ನೀಡುತ್ತೇನೆ ಎಂದು ತಿಳಿಸಿದರು.

ಸಂತ ಫ್ರಾನ್ಸಿಸ್ ಝೇವಿಯರ್ ಕನ್ನಡ ಪ್ರೌಢಶಾಲೆ, ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಸಂತ ಫ್ರಾನ್ಸಿಸ್ ಝೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಈ ಸಂದರ್ಭದಲ್ಲಿ ಗಿಡ ವಿತರಣೆ ನಡೆಸಲಾಯಿತು.

ವಿವಿಧ ಶಾಲಾ ಕಾಲೇಜುಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ಮತ್ತು ಶಿಕ್ಷಕ ಮತ್ತು ವಿದ್ಯಾರ್ಥಿಗಳಿಗೆ ಗಿಡ ನೀಡುವುದರ ಮೂಲಕ ವಾಗಿ ಉದ್ಗಾಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ವಲಯ ಉಡುಪಿ ಇದರ ಅರಣ್ಯ ಪ್ರೇರಕರಾಗಿರುವ ಪ್ರತ್ಯಕ್ಷ್ ಕಾಮತ್, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಲಯನ್ಸ್ ಜಿಲ್ಲಾ ಡೈರೆಕ್ಟರಿ ಎಡಿಟರ್ ಲ. ಸ್ವಪ್ನಾ ಸುರೇಶ್, ವಲಯ ಎರಡರ ವಲಯಾಧ್ಯಕ್ಷ ಲ. ಜೋನ್ ಫೆರ್ನಾಂಡಿಸ್, ಲಯನ್ಸ್ ಕ್ಲಬ್ ಸಂತೆಕಟ್ಟೆ ಅಧ್ಯಕ್ಷ ಲ. ಪ್ರವೀಣ್ ಕರ್ವಾಲೋ, ಕ್ಯಾಬಿನೆಟ್ ಸದಸ್ಯ ಲ. ಗೊಡ್ಫ್ರಿ ಡಿಸೋಜಾ, ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ವಿಜಯ ಕುಮಾರ್ ಉದ್ಯಾವರ, ಶಾಲಾ ಕಾಲೇಜು ಮುಖ್ಯೋಪಾಧ್ಯಾಯರು ಮತ್ತು ಲಯನ್ಸ್ ಸದಸ್ಯರು ಉಪಸ್ಥಿತರಿದ್ದರು.

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷ ಲ. ಅನಿಲ್ ಲೋಬೊ ಸ್ವಾಗತಿಸಿದರೆ, ಕೋಶಾಧಿಕಾರಿ ಲ. ರೋಶನ್ ಕ್ರಾಸ್ತಾ ಧನ್ಯವಾದ ಸಮರ್ಪಿಸಿದರು. ಕಾರ್ಯದರ್ಶಿ ಲ. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

9 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

10 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

10 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

10 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

10 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago