ಲವ್ ಜಿಹಾದ್‌ ಗಿಂತಲೂ ಮುಖ್ಯವಾದ ಹಲವಾರು ಸಮಸ್ಯೆಗಳು ರಾಜ್ಯದಲ್ಲಿವೆ : ಹೆಚ್.ಡಿ ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಲವ್ ಜಿಹಾದ್‌ ಗಿಂತಲೂ ಮುಖ್ಯವಾದ ಹಲವಾರು ಸಮಸ್ಯೆಗಳು ರಾಜ್ಯದಲ್ಲಿವೆ : ಹೆಚ್.ಡಿ ಕುಮಾರಸ್ವಾಮಿ -Vishwanews24

ಮೈಸೂರು: ಲವ್ ಜಿಹಾದ್‌ ಗಿಂತಲೂ ಮುಖ್ಯವಾದ ಹಲವಾರು ಸಮಸ್ಯೆಗಳು ರಾಜ್ಯದಲ್ಲಿವೆ. ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ .

ರಾಜ್ಯದಲ್ಲಿ ಲವ್ ಜಿಹಾದ್ ಬಿಟ್ಟು ಹಲವಾರು ದೊಡ್ಡ ದೊಡ್ಡ ಸಮಸ್ಯೆಗಳಿವೆ ಅದನ್ನು ಮೊದಲು ಬಗೆಹರಿಸಲಿ ಎಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಾಸ್ ಬ್ರೀಡ್ ಕುರಿತು ಹೇಳಿಕೆ ನೀಡಿದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕ್ರಾಸ್ ಬ್ರೀಡಿಂಗ್ ವಿಚಾರ ನನಗೆ ಬೇಡ. ಅದು ದೊಡ್ಡವರಿಗೆ ಸಂಬಂಧಪಟ್ಟ ವಿಚಾರ‌ ಎಂದು ಟಾಂಗ್ ನೀಡಿದ್ದಾರೆ.

ಬಿಜೆಪಿಯವರ ಗ್ರಾಮ ಸ್ವರಾಜ್ ಕಾರ್ಯಕ್ರಮ ವರ್ಕೌಟ್ ಆಗಲ್ಲ: ಗ್ರಾಮ ಪಂಚಾಯತ್ ಚುನಾವಣೆ ಪಕ್ಷಗಳ ಚಿಹ್ನೆ ಆಧಾರದ ಮೇಲೆ ನಡೆಯಲ್ಲ. ಹೀಗಾಗಿ ಬಿಜೆಪಿಯವರ ಗ್ರಾಮ ಸ್ವರಾಜ್ ಕಾರ್ಯಕ್ರಮ ವರ್ಕೌಟ್ ಆಗಲ್ಲ. ಗ್ರಾ.ಪಂ ಚುನಾವಣೆಯಲ್ಲಿ ಯಾವುದೇ ಪಕ್ಷ ಇರಲ್ಲ. ಇದರಲ್ಲಿ ಒಂದೇ ಪಕ್ಷದ ಇಬ್ಬರು, ಮೂವರು ಸ್ಪರ್ಧೆ ಮಾಡಬಹುದು. ಒಂದೇ ಕುಟುಂಬದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾಗಿರುವುದನ್ನು ನೋಡಿದ್ದೇವೆ. ಸ್ಥಳೀಯ ವಿಚಾರದ ಆಧಾರದ ಮೇಲೆ ಗ್ರಾ.ಪಂ ಚುನಾವಣೆ ನಡೆಯುತ್ತೆ‌. ಆದ್ದರಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.