ಮೈಸೂರು: ಲವ್ ಜಿಹಾದ್ ಗಿಂತಲೂ ಮುಖ್ಯವಾದ ಹಲವಾರು ಸಮಸ್ಯೆಗಳು ರಾಜ್ಯದಲ್ಲಿವೆ. ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ .
ರಾಜ್ಯದಲ್ಲಿ ಲವ್ ಜಿಹಾದ್ ಬಿಟ್ಟು ಹಲವಾರು ದೊಡ್ಡ ದೊಡ್ಡ ಸಮಸ್ಯೆಗಳಿವೆ ಅದನ್ನು ಮೊದಲು ಬಗೆಹರಿಸಲಿ ಎಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಾಸ್ ಬ್ರೀಡ್ ಕುರಿತು ಹೇಳಿಕೆ ನೀಡಿದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕ್ರಾಸ್ ಬ್ರೀಡಿಂಗ್ ವಿಚಾರ ನನಗೆ ಬೇಡ. ಅದು ದೊಡ್ಡವರಿಗೆ ಸಂಬಂಧಪಟ್ಟ ವಿಚಾರ ಎಂದು ಟಾಂಗ್ ನೀಡಿದ್ದಾರೆ.
ಬಿಜೆಪಿಯವರ ಗ್ರಾಮ ಸ್ವರಾಜ್ ಕಾರ್ಯಕ್ರಮ ವರ್ಕೌಟ್ ಆಗಲ್ಲ: ಗ್ರಾಮ ಪಂಚಾಯತ್ ಚುನಾವಣೆ ಪಕ್ಷಗಳ ಚಿಹ್ನೆ ಆಧಾರದ ಮೇಲೆ ನಡೆಯಲ್ಲ. ಹೀಗಾಗಿ ಬಿಜೆಪಿಯವರ ಗ್ರಾಮ ಸ್ವರಾಜ್ ಕಾರ್ಯಕ್ರಮ ವರ್ಕೌಟ್ ಆಗಲ್ಲ. ಗ್ರಾ.ಪಂ ಚುನಾವಣೆಯಲ್ಲಿ ಯಾವುದೇ ಪಕ್ಷ ಇರಲ್ಲ. ಇದರಲ್ಲಿ ಒಂದೇ ಪಕ್ಷದ ಇಬ್ಬರು, ಮೂವರು ಸ್ಪರ್ಧೆ ಮಾಡಬಹುದು. ಒಂದೇ ಕುಟುಂಬದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾಗಿರುವುದನ್ನು ನೋಡಿದ್ದೇವೆ. ಸ್ಥಳೀಯ ವಿಚಾರದ ಆಧಾರದ ಮೇಲೆ ಗ್ರಾ.ಪಂ ಚುನಾವಣೆ ನಡೆಯುತ್ತೆ. ಆದ್ದರಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…