Featured

ಲವ್ ಬ್ರೇಕಪ್ –  ಪ್ರೇಯಸಿ ಕತ್ತುಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಪ್ರಿಯಕರ – vishwanews24

ಲವ್ ಬ್ರೇಕಪ್ –  ಪ್ರೇಯಸಿ ಕತ್ತುಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಪ್ರಿಯಕರ

ಹಾಸನ : ಲವ್ ಬ್ರೇಕಪ್ ಆದ ಸಿಟ್ಟಿಗೆ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಸುಚಿತ್ರಾ (20) ಎಂದು ಗುರುತಿಸಲಾಗಿದೆ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ.

ಇಬ್ಬರು ಇಂಜಿನಿಯರಿಂಗ್ ಒದುತ್ತಿರುವ ವಿಧ್ಯಾರ್ಥಿಗಳಾಗಿದ್ದು, ತೇಜಸ್ ಹಾಗೂ ಸುಚಿತ್ರಾ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದ್ದು, ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಬ್ರೇಕಪ್ ಆಗಿದೆ. ಈ ನಡುವೆ ಮರು ಸಂಧಾನದ ಮಾತುಕತೆ ಎಂದು ಆಕೆಯನ್ನು ಆಹ್ವಾನಿಸಿದ ಹುಡುಗ ಪ್ರೀತಿಸಲು ನಿರಾಕರಿಸಿದ್ದಕ್ಕೆ ತೇಜಸ್ ಸುಚಿತ್ರಾಳನ್ನು ತನ್ನೊಂದಿಗೆ ಕುಂತಿಬೆಟ್ಟಕ್ಕೆ ಕರೆದೊಯ್ದಿದ್ದಾನೆ. ಇಂದು ಮುಂಜಾನೆ ಯುವತಿಯನ್ನು ಒಂಟಿಯಾಗಿ ಕರೆದೊಯ್ದು ಬಳಿಕ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ತೇಜಸ್ ಎಸ್ಕೇಪ್ ಆಗಿದ್ದ.

ಸುಚಿತ್ರಾ ಆಲೂರು ತಾಲೂಕಿನ ಕವಳಗೆರೆ ಗ್ರಾಮದವಳಾಗಿದ್ದು, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಓದುತ್ತಿದ್ದಳು. ಮೂಲತಃ ಹಾಸನ ತಾಲೂಕಿನ ಶಂಕರನಹಳ್ಳಿ ಗ್ರಾಮದವನಾದ ತೇಜಸ್ ಕೂಡಾ ಮೊಸಳೆಹೊಸಳ್ಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago