Featured

ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ಸಾವು : ನಿರ್ಮಾಪಕ, ನಿರ್ದೇಶಕ ಸೇರಿ ಐವರ ವಿರುದ್ಧ `FIR’ ದಾಖಲು -Vishwanews24

ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ಸಾವು : ನಿರ್ಮಾಪಕ, ನಿರ್ದೇಶಕ ಸೇರಿ ಐವರ ವಿರುದ್ಧ `FIR’ ದಾಖಲು -Vishwanews24

ಬೆಂಗಳೂರು : ಸ್ಯಾಂಡಲ್ ವುಡ್ ನ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮಾ ನಿರ್ಮಾಪಕ, ನಿರ್ದೇಶಕ ಸೇರಿದಂತೆ ಐದು ಜನರ ವಿರುದ್ಧ ಬಿಡಿದಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಲವ್ ಯೂ ರಚ್ಚು ಸಿನಿಮಾದ ನಿರ್ದೇಶಕ ಶಂಕರ ಎ1, ನಿರ್ಮಾಪಕ ಗುರುದೇಶಪಾಂಡೆ ಎ2 ಆರೋಪಿ, ಸಿನಿಮಾದ ಸಾಹಸ ನಿರ್ದೇಶಕ ವಿನೋದ್ ಕುಮಾರ್ ಎ3 ಆರೋಪಿ, ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಎ4 ಆರೋಪಿ, ಕ್ರೇನ್ ಅಪರೇಟರ ಮಹದೇವ್ ಎ 5 ಆರೋಪಿ ಎಂದು ಬಿಡದಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ನಿರ್ಮಾಪಕ ಗುರುದೇಶ ಪಾಂಡೆ ಹಾಗೂ ಪ್ರೋಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಘಟನೆ ಬಳಿಕ ಪರಾರಿಯಾಗಿದ್ದು, ಬಿಡದಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಲವ್​ ಯೂ ರಚ್ಚು ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ರಚಿತಾ ರಾಮ್ ಈ ಚಿತ್ರದ ನಾಯಕಿ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗುರು ದೇಶಪಾಂಡೆ ಚಿತ್ರದ ನಿರ್ಮಾಪಕ. ಮಣಿಕಾಂತ್​ ಕದ್ರಿ ಅವರು ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ಲವ್​​ ಯೂ ರಚ್ಚು ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ (26) ಮೃತಪಟ್ಟಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago