Featured

ಲಷ್ಕರ್-ಎ-ತೊಯ್ಬಾ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಗುಂಡಿಕ್ಕಿ ಹತ್ಯೆ – vishwanews24

ಲಷ್ಕರ್-ಎ-ತೊಯ್ಬಾ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಗುಂಡಿಕ್ಕಿ ಹತ್ಯೆ

ಇಸ್ಲಾಮಾಬಾದ್: ಲಷ್ಕರ್-ಎ-ತೊಯ್ಬಾ ಮಾಜಿ ಕಮಾಂಡರ್ ಅಕ್ರಮ್ ಖಾನ್ ಅವರನ್ನು ಪಾಕಿಸ್ತಾನದಲ್ಲಿ ಗುರುವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿವರಗಳ ಪ್ರಕಾರ, ಅಕ್ರಮ್ ಗಾಜಿ ಎಂಬ ಹೆಸರಿನಿಂದಲೂ ಕರೆಯಲ್ಪಡುವ ಅಕ್ರಮ್ ಖಾನ್, ಬಜೌರ್ ಜಿಲ್ಲೆಯಲ್ಲಿ ಅಪರಿಚಿತ ದಾಳಿಕೋರರಿಂದ ಗುಂಡಿಕ್ಕಿ ಕೊಲ್ಲಲ್ಪತ್ತಿದ್ದಾನೆ ಎಂದು ಹೇಳಲಾಗಿದೆ.

2018 ರಿಂದ 2020 ರವರೆಗೆ ಎಲ್ಇಟಿ ನೇಮಕಾತಿ ಸೆಲ್ ಅನ್ನು ಮುನ್ನಡೆಸಿದ್ದ ಖಾನ್, ಪಾಕಿಸ್ತಾನದಲ್ಲಿ ಭಾರತ ವಿರೋಧಿ ಭಾಷಣಗಳಿಗೆ ಹೆಸರುವಾಸಿಯಾಗಿದ್ದ. ಅಲ್ಲದೆ ಭಯೋತ್ಪಾದಕ ಗುಂಪಿನ ಪ್ರಸಿದ್ಧ ವ್ಯಕ್ತಿಯಾಗಿದ್ದು, ದೀರ್ಘಕಾಲದವರೆಗೆ ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ.

ಖಾನ್ ಎಲ್‌ಇಟಿ ನೇಮಕಾತಿ ಸೆಲ್‌ಗೆ ನೇತೃತ್ವ ವಹಿಸಿದ್ದರು, ಈ ವೇಳೆ ಉಗ್ರ ಸಂಘಟನೆಗೆ ಬೇಕಾದ ಯುವಕರನ್ನು ಉದ್ಯೋಗದ ಹೆಸರಲ್ಲಿ ನೇಮಕ ಮಾಡಿಕೊಂಡು ಅವರಿಗೆ ಭಯೋತ್ಪಾದನೆ ಬಗ್ಗೆ ತರಬೇತಿ ಕೊಡುತ್ತಿದ್ದ ಎನ್ನಲಾಗಿದೆ.

ಕಳೆದ ಅಕ್ಟೋಬರ್‌ನಲ್ಲಿ ಪಠಾಣ್‌ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್‌ನನ್ನು ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಲತೀಫ್ ಪಾಕಿಸ್ತಾನದ ಗುಜ್ರಾನ್‌ವಾಲಾ ನಗರದಿಂದ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬರಾಗಿದ್ದರು ಮತ್ತು 2016 ರಲ್ಲಿ ಪಠಾಣ್‌ಕೋಟ್ ವಾಯುಪಡೆಯ ನಿಲ್ದಾಣಕ್ಕೆ ನುಸುಳಿದ್ದ ನಾಲ್ವರು ಭಯೋತ್ಪಾದಕರ ಹ್ಯಾಂಡ್ಲರ್ ಕೂಡ ಆಗಿದ್ದ.

Vishwa News 24

Recent Posts

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

11 minutes ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

22 minutes ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

26 minutes ago

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…

40 minutes ago

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ – vishwanews24

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ …

59 minutes ago

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ – vishwanews24

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ ಮಂಗಳೂರು : ರಾತ್ರಿ…

1 hour ago