ಶ್ರೀನಗರ: ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯ ಉನ್ನತ ದರ್ಜೆಯ ಕಮಾಂಡರ್ ಮತ್ತು ಪಾಕಿಸ್ಥಾನಿ ಉಗ್ರನೋರ್ವನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ.
ಶ್ರೀನಗರದ ಪಾರಿಂಪೊರಾ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಹಲವು ಮಂದಿ ನಾಗರಿಕರು ಮತ್ತು ಸೈನಿಕರ ಸಾವಿಗೆ ಕಾರಣನಾಗಿದ್ದ ಲಷ್ಕರ್ ಕಮಾಂಡರ್ ನದೀಂ ಅಬ್ರಾರ್ ಮತ್ತು ಪಾಕಿಸ್ಥಾನಿ ಉಗ್ರನನ್ನು ಹತ್ಯೆ ಮಾಡಲಾಗಿದೆ.ಈ ಪಾಕಿಸ್ಥಾನಿ ಉಗ್ರ ನದೀಂ ಅಬ್ರಾರ್ ಗೆ ಸಹಾಯಕನಾಗಿದ್ದ.
ಎರಡು ಎಕೆ -47 ರೈಫಲ್‌ಗಳು ಮತ್ತು ಮದ್ದುಗುಂಡುಗಳನ್ನು ಒಳಗೊಂಡಂತೆ ಹಲವಾರು ಆಯುಧಳನ್ನು ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಭಯೋತ್ಪಾದಕರು ಹೆದ್ದಾರಿಯ ಮೇಲೆ ದಾಳಿ ನಡೆಸುವ ಬಗ್ಗೆ ಖಚಿತ ಮಾಹಿತಿ ಇಲಾಖೆಗೆ ಸಿಕ್ಕಿತ್ತು.ಈ ಮಾಹಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯಿಂದ ಜಂಟಿಯಾಗಿ ಹೆದ್ದಾರಿಯಲ್ಲಿ ನಾಕಾ ಬಂದಿ ಹಾಕಲಾಯಿತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…