ಲಾರಿ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ : 6 ಪ್ರಯಾಣಿಕರ ದುರ್ಮರಣ

Featured, ಜಿಲ್ಲೆ

ಧಾರವಾಡ: ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ಲಾರಿ ಮತ್ತು ಖಾಸಗಿ ಬಸ್​ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿದ್ದು 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಮುಂಬೈನಿಂದ ಕರ್ನಾಟಕ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು, ಬೆಂಗಳೂರು ಮೂಲದ ಕಾತ್ಯಾಯಿನಿ ಟ್ರಾವಲ್ಸ್‌ನ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು. ಈ ಬಸ್​ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ಅಪಘಾತಕ್ಕೀಡಾಗಿದೆ. ಹುಬ್ಬಳ್ಳಿಯಿಂದ ಹಂಪಿಗೆ ತೆರಳುತ್ತಿದ್ದಾಗ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಖಾಸಗಿ ಬಸ್‌ನಲ್ಲಿದ್ದ ಮುಂಬೈ ಮೂಲದ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತರನ್ನು ವಿಶ್ವನಾಥ್‌ (76), ದಿನಕರ್‌ (74), ರಮೇಶ್‌ ಜಯಪಾಲ್ (70), ಸುಮೇಧಾ (65), ಲಾಹು (65),  ಸುಚಿತ್ರಾ (65) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯಲ್ಲಿ ಸಾವನ್ನಪ್ಪಿದವರು ಮುಂಬೈನಿಂದ ಕರ್ನಾಟಕ ರಾಜ್ಯ ಪ್ರವಾಸಕ್ಕೆ ಬಂದಿದ್ದು, ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದರು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.