ಧಾರವಾಡ: ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿದ್ದು 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಮುಂಬೈನಿಂದ ಕರ್ನಾಟಕ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು, ಬೆಂಗಳೂರು ಮೂಲದ ಕಾತ್ಯಾಯಿನಿ ಟ್ರಾವಲ್ಸ್‌ನ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ಬಸ್ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ಅಪಘಾತಕ್ಕೀಡಾಗಿದೆ. ಹುಬ್ಬಳ್ಳಿಯಿಂದ ಹಂಪಿಗೆ ತೆರಳುತ್ತಿದ್ದಾಗ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಖಾಸಗಿ ಬಸ್‌ನಲ್ಲಿದ್ದ ಮುಂಬೈ ಮೂಲದ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮೃತರನ್ನು ವಿಶ್ವನಾಥ್ (76), ದಿನಕರ್ (74), ರಮೇಶ್ ಜಯಪಾಲ್ (70), ಸುಮೇಧಾ (65), ಲಾಹು (65), ಸುಚಿತ್ರಾ (65) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದವರು ಮುಂಬೈನಿಂದ ಕರ್ನಾಟಕ ರಾಜ್ಯ ಪ್ರವಾಸಕ್ಕೆ ಬಂದಿದ್ದು, ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…