ಲಾಸ್ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು: 1.80 ಲಕ್ಷ ಜನರ ಸ್ಥಳಾಂತರ ; 19,000 ಎಕರೆ ಪ್ರದೇಶ ಸುಟ್ಟು ಭಸ್ಮ – vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಲಾಸ್‌ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು ; ಬಹುತೇಕ ಹೊತ್ತಿ ಉರಿದ ಕ್ಯಾಲಿಫೋರ್ನಿಯಾ

ವಾಷಿಂಗ್ಟನ್‌: ಅಮೆರಿಕದ 2ನೇ ಅತಿದೊಡ್ಡ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ಕಾಡಿಚ್ಚು ತನ್ನ ಬೆಂಕಿ ಕೆನ್ನಾಲಿಗೆಯನ್ನು ಚಾಚುತ್ತಲೇ ಇದೆ. ಅಮೆರಿಕದ 2ನೇ ಅತಿದೊಡ್ಡ ನಗರವಾದ ಕ್ಯಾಲಿಫೋರ್ನಿಯಾ ಬಹುತೇಕ ಹೊತ್ತಿ ಉರಿಯುತ್ತಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಈಗಾಗಲೇ ಪೆಸಿಫಿಕ್‌ ಪಾಲಿಸೇಡ್ಸ್‌ ಪ್ರದೇಶದ ನೆರಹೊರೆಯನ್ನು ಆವರಿಸಿದ್ದು, 19,000 ಎಕರೆ ಪ್ರದೇಶ ಸುಟ್ಟು ಭಸ್ಮವಾಗಿದೆ. ಮತ್ತೊಂದೆಡೆ ಅಲ್ಟಾಡೆನಾದಲ್ಲಿ 13,000 ಎಕರೆ ಪ್ರದೇಶ ನಾಶವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಕಿ ನಿಯಂತ್ರಿಸಲು ಅಮೆರಿಕ ಕ್ಯಾಲಿಫೋರ್ನಿಯಾದ ನ್ಯಾಷನಲ್‌ ಗಾರ್ಡ್‌ ತಂಡವನ್ನು ನಿಯೋಜಿಸಿದೆ ಎಂದು ವರದಿಯಾಗಿದೆ.

ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ : ಡಾ. ಜಿ ಪರಮೇಶ್ವರ್  – vishwanews24

ಲಾಸ್‌ ಏಂಜಲೀಸ್‌ ನಗರಾದ್ಯಂತ ರಾಷ್ಟ್ರೀಯ ಪ್ರಶಸ್ತಿ, ಆಸ್ಕರ್‌ ಪ್ರಶಸ್ತಿ ವಿಜೇತ ಹಾಲಿವುಡ್‌ ನಟರ ಮನೆಗಳು ಸುಟ್ಟು ಕರಕಲಾಗಿವೆ. ಒಟ್ಟಾರೆ 9,000ಕ್ಕೂ ಹೆಚ್ಚು ಮನೆಗಳು ನಾಶವಾಗಿದ್ದು, 1.80 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ

Leave a Reply