ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಗಾರ್ತಿ, ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ(74) ಇಂದು ಲಿಂಗೈಕ್ಯರಾಗಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ.
ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದರು. ಹೀಗಾಗಿ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಮಾರ್ಚ್ 10ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಾತೆ ಮಹಾದೇವಿ ಗುರು ಲಿಂಗಾನಂದ ಅವರಿಂದ ಪ್ರಭಾವಿತರಾಗಿ ಕಿರಿಯ ವಯಸ್ಸಿನಲ್ಲಿ ಸನ್ಯಾಸ ಸ್ವೀಕರಿಸಿದ್ದರು. ಇವರನ್ನು ಪ್ರಥಮ ಮಹಿಳಾ ಜಗದ್ಗುರು ಎಂದು ಭಕ್ತರು ಗುರುತಿಸಿದ್ದಾರೆ.
ಮಾತೆ ಮಹಾದೇವಿ ಮಾರ್ಚ್ 13, 1946ರಂದು ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಜನಿಸಿದ್ದರು. ಇವರ ಮೂಲ ಹೆಸರು ರತ್ನ ಆಗಿದ್ದು, ದೀಕ್ಷೆ ಪಡೆದ ಬಳಿಕ ಮಾತೆ ಮಹಾದೇವಿ ಎಂದು ಗುರುತಿಸಿಕೊಂಡಿದ್ದರು..
ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಮುನ್ನಲೆಗೆ ಬಂದಾಗ ಹೋರಾಟದ ನೇತೃತ್ವ ವಹಿಸಿದ್ದು ಮಾತೆ ಮಹಾದೇವಿಯವರು. ಲಿಂಗಾಯತ ಪ್ರತ್ಯೇಕ ಧರ್ಮದ ಸ್ಥಾನಮಾನ ಪಡೆಯುವವರೆಗೂ ಹೋರಾಟ ನಡೆಸುವುದಾಗಿ ಮಹಾದೇವಿ ಹೇಳಿದ್ದರು. ಜತೆಗೆ ದೆಹಲಿಯಲ್ಲೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…