ಲಿಂಗಾಯುತರಿಗೆ ಮೀಸಲಾತಿ ನೀಡಿ ಹಿಂದುಳಿದ ವರ್ಗಕ್ಕೆ ಸೇರಿಸಬೇಕು : ಬಸವರಾಜ್ ಹೊರಟ್ಟಿ ಒತ್ತಾಯ -Vishwanews24

ಹುಬ್ಬಳ್ಳಿ: ರಾಜ್ಯದಲ್ಲಿ ಸುಮಾರು 1.18 ಕೋಟಿಯಷ್ಟು ಲಿಂಗಾಯತ ಜನಸಂಖ್ಯೆ ಇದ್ದು, ಸಮಾಜಕ್ಕೆ ಸೌಲಭ್ಯ ನಿಟ್ಟಿನಲ್ಲಿ ಶೇಕಡಾ16-18ರಷ್ಟು ಮೀಸಲಾತಿ ನೀಡಬೇಕು, ಸಮಾಜವನ್ನು ಇತರೆ ಹಿಂದುಳಿದ ವರ್ಗ ಕ್ಕೆ ಸೇರಿಸಬೇಕೆಂದು ವಿಧಾನ ಪರಿಷತ್ತು ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮದಿಂದ ಸಮಾಜಕ್ಕೆ ಏನು ಪ್ರಯೋಜನ ಆಗದು.

ನಿಗಮಕ್ಕೆ ವರ್ಷಕ್ಕೆ ಒಂದು ಸಾವಿರ ಕೋಟಿ ರೂಪಾಯಿಗಳು ನೀಡಿದರು, ಸಮಾಜದ ಶೇ.25 ರಷ್ಟು ಜನರಿಗೆ ತಲಾ 3575 ರೂ.ಬರುತ್ತದೆ ಇದರಿಂದ ಏನು ಅಭಿವೃದ್ಧಿ ಸಾಧ್ಯ. ಶೇ.16-18ರಷ್ಟು ಮೀಸಲಾತಿ ನೀಡಿ ಹಿಂದುಳಿದ ವರ್ಗಕ್ಕೆ ಸೇರಿಸಿದರೆ ಸಮಾಜದ ಯುವಕರಿಗೆ ಅನುಕೂಲವಾಗಲಿದೆ ಎಂದರು.

ಈ ಹಿಂದೆ ನಾವು ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನದ ಹೋರಾಟ ಕೈಗೊಂಡಾಗ ಧರ್ಮ ಒಡೆಯುವ, ರಾಜಕೀಯ ಪ್ರೇರಿತ ಪಟ್ಟ ಕಟ್ಟಲಾಯಿತು. ಸೌಲಭ್ಯ ದೊರೆತಿದ್ದರೆ ಸಮಾಜದ ಎಲ್ಲರಿಗೂ ಲಾಭವಾಗುತ್ತಿತ್ತು.

ಈಗಲಾದರೂ ಸಮಾಜ ಎಲ್ಲರೂ ಸೇರಿ ಶೇ.16-18ರಷ್ಟು ಮೀಸಲಾತಿ, ಹಿಂದುಳಿದ ವರ್ಗಕ್ಕೆ ಸೇರಿಸಲು ಸಂಘಟಿತ ಧ್ವನಿ ಮೊಳಗಿಸುವ ಅನಿವಾರ್ಯತೆ ಇದೆ ಎಂದರು.

ರಾಜ್ಯ ಸರ್ಕಾರದ ಸಾವಯವ ಕೃಷಿ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ . 69 ಲಕ್ಷ ರೈತರಿಗೆ ಲಾಭ ವಾಗಿದೆ ಎಂದು ದಾಖಲೆಗಳು ಹೇಳುತ್ತಿವೆ.ಆದರೆ ವಾಸ್ತವ ಬೇರೆಯದ್ದೇ ಆಗಿದೆ.ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕೆಂದು ಹೊರಟ್ಟಿ ಒತ್ತಾಯಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago